ಅರ್ಹರಿಗೆ "ಗ್ಯಾರಂಟಿ' ಸೌಲಭ್ಯ ತಲುಪಿಸಲು ಸೂಚನೆ

ಧಾರವಾಡ ಜಿ.ಪಂ. ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ.
ಧಾರವಾಡ ಜಿ.ಪಂ. ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ.
Published on
ಧಾರವಾಡ: ಮಳೆಯಿಂದ ಅಥವಾ ಇತರೆ ಕಾರಣಗಳಿಂದ ವಿದ್ಯುತ್​ ಸಂಪರ್ಕ ಅಸ್ತವ್ಯಸ್ತಗೊಂಡರೆ ಹೆಸ್ಕಾಂ ಅಧಿಕಾರಿಗಳು ತಣ ಗಮನಹರಿಸಿ ಸಮಸ್ಯೆ ಬಗೆಹರಿಸಬೇಕು. ಕಾಳ ಸಂತೆಯಲ್ಲಿ ಪಡಿತರ ಅಕ್ಕಿಯನ್ನು ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಿ ಎಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್​.ಆರ್​. ಪಾಟೀಲ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯತೆ ವಹಿಸಿ ಅವರು ಮಾತನಾಡಿದರು.
ಎಲ್ಲ ತಾಲೂಕುಗಳಲ್ಲಿ ಕೆಪಿಟಿಸಿಎಲ್​ ಸವೇ ಕಾರ್ಯ ಆರಂಭಗೊಂಡಿದೆ. ಬಾಡಿಗೆ ಮನೆಯಲ್ಲಿ ವಾಸಿಸುವವರು ಕೈಬರಹದ ಬಾಡಿಗೆ ಪತ್ರವನ್ನು ಮತ್ತು ಆಧಾರ್​ ಕಾರ್ಡ್​ ಸಲ್ಲಿಸಿ ಗೃಹಜ್ಯೋತಿ ಸೌಲಭ್ಯ ಪಡೆಯಬಹುದು ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ ಮಾತನಾಡಿದರು.
ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಮುರಗಯ್ಯಾ ವಿರಕ್ತಮಠ, ಶಾಂತಪ್ಪ ಅಕ್ಕಿ, ರೇಹನ್​ ರರ ಐನಾಪೂರಿ, ರತ್ನಾ ತೇಗೂರಮಠ, ಸುಧೀರ ಬೋಳಾರ ಮಾತನಾಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net