(exibition) ಫಲಪುಷ್ಪ ಪ್ರದರ್ಶನದಿಂದ ಸಾವಯವ ಕೃಷಿಗೆ ಪ್ರೋತ್ಸಾಹ

ಇಂದಿರಾ ಗಾಜಿನ ಮನೆಯಲ್ಲಿ ಆಯೋಜಿಸಿರುವ ಜಿಲ್ಲಾಮಟ್ಟದ ಫಲಪುಷ್ಪ (exibition) ಪ್ರದರ್ಶನ
ಇಂದಿರಾ ಗಾಜಿನ ಮನೆಯಲ್ಲಿ ಆಯೋಜಿಸಿರುವ ಜಿಲ್ಲಾಮಟ್ಟದ ಫಲಪುಷ್ಪ (exibition) ಪ್ರದರ್ಶನ
Published on
ಹುಬ್ಬಳ್ಳಿ: ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮೇಳ ಆಯೋಜಿಸಲಾಗಿದೆ. ರೈತರು ಹೊಸ ಯೋಜನೆ ರೂಪಿಸಲು ಹಾಗೂ ಸಾವಯವ ಕೃಷಿ ಬೆಳೆಸಲು ಫಲಪುಷ್ಪ (exibition) ಪ್ರದರ್ಶನ ಸಹಕಾರಿಯಾಗಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಹಾಗೂ ಕೃಷಿ ಇಲಾಖೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ, ಮೀನುಗಾರಿಕೆ ಇಲಾಖೆ, ಹಾಪಕಾಮ್ಸ್ ಧಾರವಾಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಮತ್ತು ಉದ್ಯಾನ ಹಾಗೂ ಫಲಪುಷ್ಪ ಪ್ರದರ್ಶನ ಸಮಿತಿ ಆಶ್ರಯದಲ್ಲಿ ಇಲ್ಲಿಯ ಇಂದಿರಾ ಗಾಜಿನ ಮನೆಯಲ್ಲಿ ಆಯೋಜಿಸಿರುವ ಜಿಲ್ಲಾಮಟ್ಟದ ಫಲಪುಷ್ಪ ಪ್ರದರ್ಶನ, ವಾಣಿಜ್ಯ, ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.
ಯಾವುದೇ ರೀತಿಯ ರಾಸಾಯನಿಕ ಬಳಸದೇ ಅತ್ಯುತ್ತಮ ಬೆಳೆ ಬೆಳೆಯಲು ಸಾಧ್ಯವಿದೆ. ವಾಣಿಜ್ಯ ಬೆಳೆ ಬೆಳೆಯಬಹುದು. ಆಹಾರ ಪದಾರ್ಥ ಬಳಸಿಕೊಂಡು ಉತ್ತಮ ಕಲಾಕೃತಿ ಕೆತ್ತನೆ ಮಾಡಲಾಗಿದೆ. ಕೃಷಿ ಧಾನ್ಯ, ಪುಷ್ಪ, ಸಾಮಗ್ರಿ ಬಳಸಿಕೊಂಡು ಸದ್ಗುರು ಶ್ರೀ ಸಿದ್ಧಾರೂಢರ ಪ್ರತಿಮೆ ಹಾಗೂ ಕೈಲಾಸ ಮಂಟಪ ತಯಾರಿಸಲಾಗಿದೆ. ಮನೆಯಲ್ಲೂ ತೋಟಗಾರಿಕೆ ಮಾಡಬಹುದು ಎಂದರು.
ನವಲಗುಂದ ಶಾಸಕ ಎನ್.ಎಚ್. ಕೋನರಡ್ಡಿ ಮಾತನಾಡಿದರು.
ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಕಾಶಿನಾಥ ಭದ್ರಣ್ಣವರ, ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ಉಪ ನಿರ್ದೇಶಕ ಆರ್.ಜಿ. ಸಂದೀಪ, ಟಿ.ಎಚ್. ನಟರಾಜ, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ವರುಣ ಅಮೀನಗಡ, ಯೋಗೇಶ ಕಿಲಾರಿ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net