ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ crop

crop ಕೇಂದ್ರ ಸಚಿವ ಪ್ರಲ್ಹಾದ ಜೋಶಿ
crop ಕೇಂದ್ರ ಸಚಿವ ಪ್ರಲ್ಹಾದ ಜೋಶಿ
Published on

ಪ್ರಮುಖ ಮುಖ್ಯಾಂಶಗಳು

  • ಸಚಿವ ಪ್ರಲ್ಹಾದ ಜೋಶಿ ಮನವಿಗೆ ಸ್ಪಂದಿಸಿದ ಕೇಂದ್ರ ಕೃಷಿ ಸಚಿವರು.
  • ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ ಜಿಲ್ಲೆಗಳ ರೈತರಿಗೆ ಕಾಲಾವಕಾಶ.
  • ಕೇಂದ್ರ ಕೃಷಿ ಸಚಿವ ಶಿವರಾಜಸಿಂಗ್ ಚವಾಣ ಅವರೊಂದಿಗೆ ರ್ಚಚಿಸಿದ್ದರು.
ಹುಬ್ಬಳ್ಳಿ :
ಧಾರವಾಡ, ಗದಗ, ಹಾವೇರಿ ಮತ್ತು ಬಾಗಲಕೋಟೆ ಜಿಲ್ಲೆಗಳ ರೈತರಿಗೆ ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ ಅನ್ವಯಿಸಲಿದೆ.
ಜುಲೈ 15ರವರೆಗೆ ಇದ್ದ ಕಾಲಮಿತಿಯನ್ನು ಜುಲೈ 31ರವರೆಗೆ ವಿಸ್ತರಿಸುವ ಮೂಲಕ ಕೇಂದ್ರ ಸರ್ಕಾರ ಉತ್ತರ ಕರ್ನಾಟಕ ಭಾಗದ ಈ ನಾಲ್ಕು ಜಿಲ್ಲೆಗಳ ರೈತರ ನೆರವಿಗೆ ಧಾವಿಸಿದೆ.
ಈ ಜಿಲ್ಲೆಗಳಲ್ಲಿ ರೈತರು ಮಳೆ ಕೊರತೆಯಿಂದಾಗಿ ವಿಭಿನ್ನ ಬೆಳೆ ಬಿತ್ತನೆ ಮಾಡಿದ್ದು, ಇದರಿಂದಾಗಿ ಬೆಳೆ ವಿಮೆ ಪಾವತಿಸುವಲ್ಲಿ ತಾಂತ್ರಿಕ ತೊಂದರೆ ಎದುರಿಸುತ್ತಿದ್ದರು.
ಇದನ್ನು ಮನಗಂಡು ಸಚಿವ ಪ್ರಲ್ಹಾದ ಜೋಶಿ ಅವರು ಈ ಭಾಗದ ರೈತರ ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಿಸುವಂತೆ ಕೇಂದ್ರ ಕೃಷಿ ಸಚಿವ ಶಿವರಾಜಸಿಂಗ್ ಚವಾಣ ಅವರೊಂದಿಗೆ ರ್ಚಚಿಸಿ, ಮನವಿ ಮಾಡಿದ್ದರು.
ಈ ಜಿಲ್ಲೆಗಳಲ್ಲಿ ಮಳೆ ಅಭಾವ ಬೆಳೆ ವಿಮೆ ನೋಂದಣಿಗೆ ರೈತರಿಗಾಗುತ್ತಿರುವ ತೊಂದರೆ ಕುರಿತು ಶಾಸಕರಾದ ಸಿ.ಸಿ. ಪಾಟೀಲ, ಎಂ.ಆರ್. ಪಾಟೀಲ ಮತ್ತು ಧಾರವಾಡ ಲೋಕಸಭಾ ಕ್ಷೇತ್ರದ ರೈತರು ಸಹ ಸಚಿವ ಜೋಶಿ ಅವರ ಗಮನ ಸೆಳೆದಿದ್ದರು.
ಈ ಹಿನ್ನಲೆಯಲ್ಲಿ ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆಗಾಗಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಚವರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದರು.
ಜು.15ರಂದು ರಾಜ್ಯ ಸರ್ಕಾರದ ಕೃಷಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದ್ದು, ಕೇಂದ್ರ ಕೃಷಿ ಸಚಿವ ಶಿವರಾಜ ಸಿಂಗ್ ಚವ್ಹಾಣ ತಕ್ಷಣವೇ ಸ್ಪಂದಿಸಿದ್ದಾರೆ.
ವಿಮೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ರೈತರ ಹಿತದೃಷ್ಟಿಯಿಂದ ಬೆಳೆ ವಿಮೆ ನೋಂದಣಿ ಅವಧಿಯನ್ನು ವಿಸ್ತರಿಸಿದ್ದಾರೆ.
ಪ್ರಸ್ತಾವನೆ ಸಲ್ಲಿಸಿದ ಕೇವಲ 24 ಗಂಟೆಯೊಳಗೆ ಕೇಂದ್ರ ಸರ್ಕಾರ ಈ ವಿಶೇಷ ಅನುಮೋದನೆ ನೀಡಿದೆ ಎಂದು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net