farmers demand ಹೆಕ್ಟೇರ್ಗೆ 25 ಸಾವಿರ ರೂ. ಪರಿಹಾರ ಕೊಡಿ
farmers demand ಹುಬ್ಬಳ್ಳಿಯಲ್ಲಿ ವೀರೇಶ ಸೊಬರದಮಠ ಸ್ವಾಮೀಜಿ ಮಾತನಾಡಿದರು. ಗುರು ರಾಯನಗೌಡ್ರ, ವಿರುಪಾಕ್ಷಪ್ಪ, ಇತರರು ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ರೈತ ಸೇನಾ ಅಧ್ಯಕ್ಷ ಸೊಬರದಮಠ ಆಗ್ರಹ
ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕು
ಹುಬ್ಬಳ್ಳಿ:
farmers demand
ಮಳೆ ಇಲ್ಲದೇ ಬೆಳೆ ಹಾನಿಯಾಗಿ ರೈತರು ಸಂಕಷ್ಟದಲ್ಲಿದ್ದು, ಸರ್ಕಾರ ಕೂಡಲೇ ಪ್ರತಿ ಹೆಕ್ಟೇರ್ಗೆ 25 ಸಾವಿರ ರೂ. ಬರ ಪರಿಹಾರ ನೀಡಬೇಕು ಎಂದು ರೈತ ಸೇನಾ ಕರ್ನಾಟಕ ಅಧ್ಯಕ್ಷ ವೀರೇಶ ಸೊಬರದಮಠ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಸದ್ಯ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದು, ಅಲ್ಲಿ ಎಲ್ಲ ಪಕ್ಷಗಳ ಶಾಸಕರು ಬರಗಾಲ ಹಾಗೂ ರೈತರ ಸಮಸ್ಯೆಗಳ ಬಗ್ಗೆ ಗಂಭೀರ ಚರ್ಚೆ ನಡೆಸಬೇಕು. ವಿರೋಧ ಪಕ್ಷದವರು ಈ ಬಗ್ಗೆ ಸರ್ಕಾರದ ಗಮನ ಸೆಳೆಯಬೇಕು. ಆದರೆ, ಬಿಜೆಪಿಯಿಂದ ಈ ಕೆಲಸ ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳು ಸದನದಲ್ಲಿ ಸಾರ್ವಜನಿಕರ ಹಿತ ಕಾಪಾಡಲು ಪರಿಣಾಮಕಾರಿಯಾಗಿ ಮಾತನಾಡಬೇಕು. ಶಾಸಕರು ರೈತಪರ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರದ ಗಮನ ಸೆಳೆದರೆ ಅನುಕೂಲವಾಗಲಿದೆ ಎಂದರು.
ರೈತರಿಗೆ ನೋಟಿಸ್
2025ರ ಡಿಸೆಂಬರ್ನಲ್ಲಿ ಮಹದಾಯಿ ಯೋಜನೆ ಜಾರಿಗಾಗಿ ಆಗ್ರಹಿಸಿ ಬೆಂಗಳೂರಿನ ಕೋರಮಂಗಲದಲ್ಲಿರುವ ಪರಿಸರ ಭವನದ ಎದುರು ಸಂಟನೆ ವತಿಯಿಂದ ಪ್ರತಿಭಟನೆ ನಡೆಸಲಾಗಿತ್ತು. ಎಲ್ಲ ಇಲಾಖೆಗಳ ಅನುಮತಿ ಪಡೆದ ನಂತರ ಶಾಂತಿಯುವಾಗಿಯೇ ಹೋರಾಟ ಮಾಡಿದ್ದೇವು.
ಆದರೆ, ಎಂಟು ತಿಂಗಳ ನಂತರ ರೈತರಿಗೆ ನೋಟಿಸ್ ನೀಡಿ ಹೋರಾಟಗಾರರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ. ಪ್ರತಿಭಟನೆಗೆ ಅನುಮತಿ ಪಡೆದಿಲ್ಲ ಎಂದು ಕೇಸ್ ದಾಖಲಿಸಲಾಗಿದೆ ಎಂದು ಸೊಬರದಮಠ ಹೇಳಿದರು.
ಹೋರಾಟ ನಡೆಸಿದ 28 ರೈತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ರೈತ ಸೇನಾ ಕರ್ನಾಟಕವು ಪೊಲೀಸರ ಕ್ರಮವನ್ನು ಖಂಡಿಸುತ್ತದೆ. ಸರ್ಕಾರ ಕೂಡಲೇ ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕು. ಮಡಿವಾಳ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಅವರನ್ನು ಸಸ್ಪೆಂಡ್ ಮಾಡಬೇಕು ಎಂದು ಆಗ್ರಹಿಸಿದರು.
ಸೇನಾ ಮುಖಂಡರಾದ ಗುರು ರಾಯನಗೌಡ್ರ, ಮಲ್ಲಣ್ಣ ಆಲೇಕಾರ ಹಾಗೂ ವಿರುಪಾಕ್ಷ ರಾಯಣ್ಣನವರ ಗೋಷ್ಠಿಯಲ್ಲಿದ್ದರು.