ರೈತರಿಂದ ಸುವರ್ಣಸೌಧ ಚಲೋ farmers

 ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ರೈತ  (farmers) ಸಂಘ ಹಾಗೂ ಹಸಿರು ಉಪಾಧ್ಯಕ್ಷ  ಕಿಶೋರ ಮಿಠಾಯಿ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ರೈತ (farmers) ಸಂಘ ಹಾಗೂ ಹಸಿರು ಉಪಾಧ್ಯಕ್ಷ ಕಿಶೋರ ಮಿಠಾಯಿ.
Published on

ಪ್ರಮುಖ ಮುಖ್ಯಾಂಶಗಳು

  • ಮಹದಾಯಿ, ಕಳಸಾ-ಬಂಡೂರಿ ಯೋಜನೆ ಜಾರಿಯಾಗಬೇಕು.
  • ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕು.
  • ರೈತರ ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳಬೇಕು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸೇನೆ ರಾಜ್ಯ ಉಪಾಧ್ಯಕ್ಷ ಕಿಶೋರ ಮಿಠಾಯಿ, ರಾಜ್ಯದ ವಿವಿಧ ಜಿಲ್ಲೆಗಳಿಂದ ರೈತರು ಆಗಮಿಸುವರು. ಸುವರ್ಣ ಸೌಧದ ಬಳಿ ನೀಡಿರುವ ಟೆಂಟ್ ನಂ. 7ರಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದರು.
ಮಹದಾಯಿ, ಕಳಸಾ-ಬಂಡೂರಿ ಯೋಜನೆ ಜಾರಿಯಾಗಬೇಕು. ಬೆಳೆಹಾನಿ, ಬೆಳೆ ವಿಮೆ ಪರಿಹಾರವನ್ನು ತಕ್ಷಣ ಬಿಡುಗಡೆಗೊಳಿಸಬೇಕು. ರೈತ ಮತ್ತು ಮಹಿಳೆಯರ ಸ್ವ ಸಹಾಯ ಸಂಘಗಳ ಸಾಲಮನ್ನಾ ಮಾಡಬೇಕು. ರೈತರ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ಘೋಷಿಸಬೇಕು.
ಪ್ರತಿ ಟನ್ ಕಬ್ಬಿಗೆ 3,500 ರೂ. ನಿಗದಿಗೊಳಿಸಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕು ಎಂಬುದು ಸೇರಿದಂತೆ ಇನ್ನಿತರ 17 ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಸಚಿವರು ಹಾಗೂ ಅಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಮನವಿ ಪಡೆದು, ಸ್ವೀಕೃತಿಯನ್ನು ನೀಡುವುದಕ್ಕೆ ಮಾತ್ರ ಸೀಮಿತರಾಗಬಾರದು. ಪ್ರತಿಭಟನಾಕಾರರು ನೀಡಿರುವ ಮನವಿಯಲ್ಲಿನ ವಿಷಯಗಳನ್ನು ಅಧಿವೇಶನದಲ್ಲಿ ರ್ಚಚಿಸಬೇಕು. ರೈತರ ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಕಳೆದ ಬಾರಿಯ ಬೆಳಗಾವಿ ಅಧಿವೇಶನದಲ್ಲಿ ನೀಡಿದ್ದ ಮನವಿಯಲ್ಲಿನ ಅಂಶಗಳು ಇದುವರೆಗೂ ಈಡೇರಿಲ್ಲ. ಸಚಿವರು ಮತ್ತು ಅಧಿಕಾರಿಗಳು ರೈತರಿಂದ ಮನವಿ ಪಡೆದು, ಅದನ್ನು ಕಸದ ಬುಟ್ಟಿಗೆ ಚೆಲ್ಲಬಾರದು ಎಂದು ಹೇಳಿದರು.
ಸೇನೆ ರಾಜ್ಯಾದ್ಯಕ್ಷ ಸಿದ್ದರಾಜು ಕುಂದಗೋಳ, ರವಿರಾಜ ಕಂಬಳಿ, ನಿಂಗಪ್ಪ ದಿವಟಗಿ ಸುದ್ದಿಗೋಷ್ಠಿಯಲ್ಲಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net