Flyover ಡಿಸೆಂಬರ್​ನಲ್ಲಿ ಫ್ಲೈಓವರ್ ವಾಹನ ಸಂಚಾರಕ್ಕೆ ಮುಕ್ತ

Flyover ಹುಬ್ಬಳ್ಳಿಯಲ್ಲಿ ನಿರ್ವಣಗೊಳ್ಳುತ್ತಿರುವ ಫ್ಲೈ ಓವರ್ ಕಾಮಗಾರಿಯನ್ನು ಶಾಸಕ ಮಹೇಶ ಟೆಂಗಿನಕಾಯಿ ವೀಕ್ಷಿಸಿದರು.
Flyover ಹುಬ್ಬಳ್ಳಿಯಲ್ಲಿ ನಿರ್ವಣಗೊಳ್ಳುತ್ತಿರುವ ಫ್ಲೈ ಓವರ್ ಕಾಮಗಾರಿಯನ್ನು ಶಾಸಕ ಮಹೇಶ ಟೆಂಗಿನಕಾಯಿ ವೀಕ್ಷಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಕಾಮಗಾರಿ ವೀಕ್ಷಿಸಿದ ಶಾಸಕ ಮಹೇಶ ಟೆಂಗಿನಕಾಯಿ
  • ಮೇಲ್ಸೇತುವೆ ಕೆಳಗೆ ಸಿಸಿ ರಸ್ತೆ
  • ಇನ್ನೂ 4 ತಿಂಗಳಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿ ಪೂರ್ಣ
ಹುಬ್ಬಳ್ಳಿ :
Flyover ಹುಬ್ಬಳ್ಳಿಯಲ್ಲಿ ನಿರ್ಮಾಣ ಹಂತದಲ್ಲಿರುವ ಫ್ಲೈ ಓವರ್ ಡಿಸೆಂಬರ್ ಅಂತ್ಯಕ್ಕೆ ವಾಹನಗಳ ಸಂಚಾರಕ್ಕೆ ತೆರೆದುಕೊಳ್ಳಲಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ತಿಳಿಸಿದರು.
ಇಲ್ಲಿನ ಹಳೇ ಕೋರ್ಟ್ ವೃತ್ತದಿಂದ ಹೊಸೂರು ವೃತ್ತದವರೆಗೆ ನಡೆಯುತ್ತಿರುವ ಫ್ಲೈ ಓವರ್ ಕಾಮಗಾರಿಯನ್ನು ವೀಕ್ಷಿಸಿದ ಅವರು ಬಳಿಕ ಐಟಿ ಪಾರ್ಕ್ ಎದುರು ಫ್ಲೈ ಓವರ್ ಕೆಳಭಾಗದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್ ವೇಳೆಗೆ ಫ್ಲೈಓವರ್​ಗೆ ಬಣ್ಣ ಹಚ್ಚಿ, ವಿದ್ಯುತ್ ದೀಪಗಳನ್ನು ಜೋಡಿಸಿ, ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದರು.
ಫ್ಲೈ ಓವರ್ ಕಾಮಗಾರಿ ಇದುವರೆಗೆ ಶೇ. 70ರಷ್ಟು ಪೂರ್ಣಗೊಂಡಿದೆ. ಕಾಮಗಾರಿ ಪೂರ್ಣಗೊಂಡಿರುವ ಸ್ಥಳದಲ್ಲಿ ಸಿಮೆಂಟ್ ರಸ್ತೆ ನಿರ್ಮಾಣ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಇನ್ನೂ 4 ತಿಂಗಳಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲಾಗುವುದೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಕಾಮಗಾರಿಗೆ ಹೆಚ್ಚಿನ ಅನುದಾನ ನೀಡುವಂತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಮನವಿ ನೀಡಿದ್ದೇವು.
ಮನವಿಗೆ ಸ್ಪಂದಿಸಿರುವ ಸಚಿವ ಗಡ್ಕರಿ ಅವರು, 13 ಕೋಟಿ ರೂ. ಹೆಚ್ಚಿನ ಅನುದಾನ ಮಂಜೂರು ಮಾಡಿದ್ದಾಗಿ ತಿಳಿಸಿದರು.
ಉಪ ಮೇಯರ್ ಸಂತೋಷ ಚವ್ಹಾಣ, ಪಾಲಿಕೆ ಸದಸ್ಯೆ ಮೀನಾಕ್ಷಿ ವಂಟಮುರಿ, ಡಿಸಿಪಿ ರವೀಶ, ಪಿಡಬ್ಲ್ಯುಡಿ ಎನ್​ಎಚ್ ಎಇಇ ಸತೀಶ ನಾಗನೂರ, ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ಬಿಜೆಪಿ ಪ್ರಮುಖರಾದ ರವಿ ನಾಯಕ, ಈಶ್ವರಗೌಡ ಪಾಟೀಲ, ರಾಮನಗೌಡ ಶೆಟ್ಟನಗೌಡ್ರ, ಪ್ರವೀಣ ಪವಾರ, ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net