ಇದರೊಂದಿಗೆ ಸುಮಾರು 350 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೂ ಶಂಕುಸ್ಥಾಪನೆ ನೆರವೇರಲಿದೆ. ನವಲಗುಂದಕ್ಕೆ ಯುಜಿಡಿ ವ್ಯವಸ್ಥೆ, ಸಿಸಿ ರಸ್ತೆ, ಸಿಡಿ ನಿಮಾಣ, ಅಣ್ಣಿಗೇರಿಯ ನೂತನ ಪುರಸಭೆಗೆ ಭೂಮಿ ಪೂಜೆ, ಪ್ರಜಾ ಸೌಧ ಕಟ್ಟಡ ನಿಮಾಣ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ಶಿಕ್ಷಕರ ಗುರುಭವನ, ಪಶು ಚಿಕಿತ್ಸಾಲಯ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳು ಇದರಲ್ಲಿವೆ ಎಂದರು. ನಾಳೆ ಸಿಎಂ, ಡಿಸಿಎಂ, ಸಚಿವರ ಆಗಮನ : ಬೆಣ್ಣಿಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿ ಶಂಕು ಸ್ಥಾಪನೆ ಹಾಗೂ ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಭೂಮಿ ಪೂಜೆ ಕಾರ್ಯಕ್ರಮವನ್ನು ಫೆ. 8ರಂದು ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿಯಲ್ಲಿ ಆಯೋಜಿಸಲಾಗಿದೆ.