ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ, ಶಾಸಕ ಮಹೇಶ ಟೆಂಗಿನಕಾಯಿ, ರಾಜ್ಯಸಭೆ ಸದಸ್ಯರಾದ ನಾರಾಯಣಸಾ ಭಾಂಡಗೆ, ಎಂ. ನಾಗರಾಜ, ವಿಧಾನ ಪರಿಷತ್ ಸದಸ್ಯರಾದ ಪ್ರದೀಪ ಶೆಟ್ಟರ್, ಲಿಂಗರಾಜ ಪಾಟೀಲ, ಕರ್ನಾಟಕ ಹಿಮೋಫಿಲಿಯಾ ಸೊಸೈಟಿ ಅಧ್ಯಕ್ಷ ಡಾ. ಸುರೇಶನ ಹನಗವಾಡಿ, ಕೆಎಲ್ಇ ಮಾಜಿ ನಿರ್ದೇಶಕ ಶಂಕರಣ್ಣ ಮುನವಳ್ಳಿ, ಕ್ಷಮತಾ ಸೇವಾ ಸಂಸ್ಥೆ ಅಧ್ಯಕ್ಷ ಗೋವಿಂದ ಜೋಶಿ, ಮೇಯರ್ ದುರ್ಗಮ್ಮ ಬಿಜವಾಡ, ಎಸ್ಎಸ್ಕೆ ಸಮಾಜದ ರಾಜ್ಯಾಧ್ಯಕ್ಷ ಶಶಿಕುಮಾರ ಮೆಹರವಾಡೆ ಅತಿಥಿಗಳಾಗಿ ಪಾಲ್ಗೊಳ್ಳುವರು. ಮಾಜಿ ಶಾಸಕ ಅಶೋಕ ಕಾಟವೆ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು. ನಿವೃತ್ತ ಯೋಧರು ಹಾಗೂ ಪೌರ ಕಾರ್ವಿುಕರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುವುದು ಎಂದರು.