geust lecture ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಿ

geust lecture ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಡಾ. ಹನುಮಂತಗೌಡ ಕಲ್ಮನಿ, ಇತರರು ಮಾಹಿತಿ ನೀಡಿದರು.
geust lecture ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಡಾ. ಹನುಮಂತಗೌಡ ಕಲ್ಮನಿ, ಇತರರು ಮಾಹಿತಿ ನೀಡಿದರು.
Published on
ಹುಬ್ಬಳ್ಳಿ: geust lecture ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸುವ ಬಗ್ಗೆ ಬಜೆಟ್​ನಲ್ಲಿ ಘೋಷಣೆ ಮಾಡಬೇಕು. ಇಲ್ಲದಿದ್ದರೆ ಮಾ. 6ರ ನಂತರ ತರಗತಿ ಬಹಿಷ್ಕರಿಸಿ ಬೆಂಗಳೂರಿನಲ್ಲಿ ಅನಿದಿರ್ಷ್ಟ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಡಾ. ಹನುಮಂತಗೌಡ ಕಲ್ಮನಿ ತಿಳಿಸಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುಜಿಸಿ ಹಾಗೂ ನಾನ್​ ಯುಜಿಸಿ ಅಭ್ಯರ್ಥಿಗಳಿಗೆ ಸರ್ಕಾರ ಸೇವಾ ಭದ್ರತೆ ನೀಡುವ ವಿಚಾರದಲ್ಲಿ ಅತ್ಯಂತ ಸಿಹಿ ಸುದ್ದಿ ನೀಡುವುದಾಗಿ ಹೇಳುತ್ತಲೇ ಬಂದಿದೆ. ಬಜೆಟ್​ನಲ್ಲಿ ಈ ಬಗ್ಗೆ ನಿರ್ಧಾರ ಪ್ರಕಟಿಸಬೇಕು. ಇಲ್ಲವಾದರೆ ತುಮಕೂರಿನಿಂದ ಬೆಂಗಳೂರಿನ ಫ್ರೀಡಂ ಪಾರ್ಕ್​ ವರೆಗೆ ಪಾದಯಾತ್ರೆ ಕೈಗೊಂಡು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು.
ರಾಜ್ಯದಲ್ಲಿ ಒಟ್ಟು 9375 ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದು, ಅದರಲ್ಲಿ ಯುಜಿಸಿ ನಿಯಮಾವಳಿಯ ನೆಪ ಹೇಳಿ ಮೂರು ತಿಂಗಳ ಹಿಂದೆ 6300 ಜನರನ್ನು ತೆಗೆದು ಹಾಕಲಾಗಿದೆ. ಈ ಮೊದಲು ಚಳಿಗಾಲದ ಅಧಿವೇಶನ ಸಮಯದಲ್ಲಿ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ಮಾಡಲಾಗಿತ್ತು. ಆಗ ಸರ್ಕಾರದ ಪ್ರತಿನಿಧಿಗಳು ಸಮಸ್ಯೆ ಪರಿಹರಿಸುವ ಭರವಸೆ ನೀಡಿದ್ದರು. ಎರಡು ಮೂರು ದಿನದಲ್ಲಿ ಬೇಡಿಕೆ ಈಡೇರಿಸುವುದಾಗಿ ಹೇಳಿದ್ದರು. ಮೂರು ತಿಂಗಳಾದರೂ ಸರ್ಕಾರ ಸ್ಪಂದಿಸಿಲ್ಲ ಎಂಬುದು ನೋವಿನ ಸಂಗತಿ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್​ ಪೂರ್ವದಲ್ಲಿಯೇ ನಮ್ಮ ಬೇಡಿಕೆ ಈಡೇರಿಸಿ ಸಿಹಿ ಸುದ್ದಿ ನೀಡಲಿ, ಪ್ರಣಾಳಿಕೆಯಲ್ಲಿ ಪಕ್ಷ ಹೇಳಿಕೊಂಡಂತೆ ನಡೆದುಕೊಳ್ಳಬೇಕು. ಅನೇಕ ಸಂದರ್ಭದಲ್ಲಿ ಕಾನೂನು ತಿದ್ದುಪಡಿ ಮಾಡಿ ಮಾನವೀಯ ನೆಲೆಯಲ್ಲಿ ಅನುಕೂಲ ಮಾಡಿಕೊಡಲಾಗಿದೆ. ಇದೀಗ ಯುಜಿಸಿ ನಿಯಮಾವಳಿಯ ನೆಪ ಹೇಳದೇ ಅತಿಥಿ ಉಪನ್ಯಾಸಕರಿಗೆ ಜೀವದಾನ ಮಾಡಬೇಕು. ಒಂದು ಸಾರಿ ಸೇವಾ ಭದ್ರತೆಯ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net