ಉಕ ಕುರುಬ ಸಮಾಜದವರಿಗೆ ಸಚಿವ ಸ್ಥಾನ ನೀಡಿ kuruba

kuruba ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಾಲುಮತ ಮಹಾಸಭಾ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ.
kuruba ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಾಲುಮತ ಮಹಾಸಭಾ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ.
Published on

ಪ್ರಮುಖ ಮುಖ್ಯಾಂಶಗಳು

  • ಪ್ರತಿ ಜಿಲ್ಲೆಯಲ್ಲಿ ಹೋರಾಟದ ಎಚ್ಚರಿಕೆ
  • ಕಾಂಗ್ರೆಸ್​ನ ಭಿಕ್ಷೆ ನಮ್ಮ ಸಮಾಜಕ್ಕೆ ಬೇಕಿಲ್ಲ.
  • ಸರ್ಕಾರ ಇನ್ನೂ ಒಂದು ವಾರದಲ್ಲಿ ಸ್ಪಷ್ಟ ನಿರ್ಧಾರ ಪ್ರಕಟಿಸಬೇಕು.
ಶನಿವಾರದಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ನ್ಯಾಯದ ಬಗ್ಗೆ ಮಾತಾಡುವ ಕಾಂಗ್ರೆಸ್ ತಕ್ಷಣ ತನ್ನ ಧೋರಣೆಯನ್ನು ಮರುಪರಿಶೀಲಿಸಬೇಕು ಎಂದು ಆಗ್ರಹಿಸಿದರು.
ಇಲ್ಲವಾದಲ್ಲಿ ಮುಂದಿನ ರಾಜಕೀಯ ಬೆಳವಣಿಗೆಗಳಿಗೆ ಕಾಂಗ್ರೆಸ್ ನೇರ ಹೊಣೆಯಾಗಲಿದೆ. ಸರ್ಕಾರ ಇನ್ನೂ ಒಂದು ವಾರದಲ್ಲಿ ಸ್ಪಷ್ಟ ನಿರ್ಧಾರ ಪ್ರಕಟಿಸಬೇಕು. ಇಲ್ಲದಿದ್ದರೆ ಪ್ರತಿ ಜಿಲ್ಲೆಯಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಮೂಲೆಗುಂಪಾಗುತ್ತಿದ್ದ ಕಾಂಗ್ರೆಸ್ ಅನ್ನು ಎರಡು ಬಾರಿ ಅಧಿಕಾರಕ್ಕೆ ತಂದಿರುವ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಹ ಮೂಲೆಗುಂಪು ಮಾಡಲಾಗಿದೆ ಎಂದು ದೂರಿದರು.
ಸಿದ್ದರಾಮಯ್ಯ ಅವರ ಮನವೊಲಿಸುವ ಉದ್ದೇಶದಿಂದ ಯತೀಂದ್ರ ಸಿದ್ದರಾಮಯ್ಯ ಹಾಗೂ ಬೈರತಿ ಸುರೇಶ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ.
ಕಾಂಗ್ರೆಸ್​ನ ಭಿಕ್ಷೆ ನಮ್ಮ ಸಮಾಜಕ್ಕೆ ಬೇಕಿಲ್ಲ. ಇಬ್ಬರೂ ಸಚಿವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಕಾಂಗ್ರೆಸ್ ಅನ್ನು ಮೊದಲಿನಿಂದಲೂ ಬೆಂಬಲಿಸುತ್ತ ಬಂದಿರುವ ಸಮುದಾಯದ ನಾಯಕರನ್ನು ಗುರುತಿಸಲು ಪಕ್ಷ ವಿಫಲವಾಗಿದೆ. ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಅವರಿಗೆ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಿ ಅವಮಾನಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿರು.
ಬ್ರಿಟಿಷರ ಕಾಲದಿಂದಲೂ ಕುರುಬ ಸಮುದಾಯವನ್ನು ಬುಡಕಟ್ಟು ಜನಾಂಗವೆಂದು ಪರಿಗಣಿಸಲಾಗಿದೆ. ರಾಜ್ಯ ಬುಡಕಟ್ಟು ಸಂಶೋಧನಾ ಕೇಂದ್ರ ಸಹ ಈ ಬಗ್ಗೆ ವರದಿ ನೀಡಿದೆ.
ಆದರೂ, ರಾಜ್ಯ ಬುಡಕಟ್ಟು ಸಲಹಾ ಮಂಡಳಿ ಹಾಗೂ ಪ್ರದೇಶ ಕಾಂಗ್ರೆಸ್ ಸಮಿತಿ ಪಟ್ಟಿಗಳಲ್ಲಿ ಕುರುಬ ಸಮುದಾಯಕ್ಕೆ ಸಂಪೂರ್ಣ ಅನ್ಯಾಯ ಮಾಡಲಾಗಿದೆ ಎಂದು ಹೇಳಿದರು.
ಸುವರ್ಣ ನಾಗರಾಳ, ಪ್ರಕಾಶ ಕಿತ್ತೂರ ಸುದ್ದಿಗೋಷ್ಠಿಯಲ್ಲಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net