ನ. 15ರಂದು ಮಂಗಳೂರಿನಿಂದ ಬೆಳಗಾವಿಗೆ ಕೆಲಸಗಾರ ವಿವೇಕ ಜತೆ ಬರುವಾಗ ಚೈನ್, ಬ್ರಾಸ್ಲೆಟ್, ಉಂಗುರ ಸೇರಿ ಒಟ್ಟು 3.2 ಕೋಟಿ ರೂ. ಮೌಲ್ಯದ ಆಭರಣಗಳನ್ನು ತಂದಿದ್ದರು. ಹಳೇ ಬಸ್ ನಿಲ್ದಾಣ ಬಳಿಯ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದರು. ನ. 19ರಂದು ಧಾರವಾಡಕ್ಕೆ ಹೋಗಿ ಹಿಂದಿರುಗುವಾಗ ನಿಲೀಜಿನ್ ರಸ್ತೆಯಲ್ಲಿ ಅವರನ್ನು ತಡೆದ ತಂಡವು, ಇಡಿ ಅಧಿಕಾರಿಗಳೆಂದು ನಂಬಿಸಿ ಗುರುತಿನ ಚೀಟಿ ತೋರಿಸಿ, ಹಿಂದಿಯಲ್ಲಿ ಮಾತನಾಡಿದ್ದಾರೆ. ವಿಚಾರಣೆಗೆ ಕಚೇರಿಗೆ ಬನ್ನಿ ಎಂದು ಕಾರಿನಲ್ಲಿ ಕರೆದುಕೊಂಡು ಹೋಗಿದೆ.