ಹುಬ್ಬಳ್ಳಿಯ ಶ್ರೀ ಹುಲಿಗೆಮ್ಮದೇವಿ ದೇವಸ್ಥಾನದಲ್ಲಿಯ ಕಟ್ಟಡ ನಿರ್ಮಾಣಕ್ಕೆ ಶಾಸಕ ಮಹೇಶ ಟೆಂಗಿನಕಾಯಿ ಅವರು ಶಾಸಕರ ಅನುದಾನದಡಿ 6,58,508 ರೂ. ಚೆಕ್ (grants) ಅನ್ನು ಬುಧವಾರ ವಿತರಿಸಿದರು.
ಹುಬ್ಬಳ್ಳಿ: ಇಲ್ಲಿಯ ಅರವಿಂದನಗರದ ಶ್ರೀ ಹುಲಿಗೆಮ್ಮದೇವಿ ದೇವಸ್ಥಾನದಲ್ಲಿಯ ಕಟ್ಟಡ ನಿರ್ಮಾಣಕ್ಕೆ ಶಾಸಕ ಮಹೇಶ ಟೆಂಗಿನಕಾಯಿ ಅವರು ಶಾಸಕರ ಅನುದಾನದಡಿ 6,58,508 ರೂ. ಚೆಕ್ (grants) ಅನ್ನು ಬುಧವಾರ ವಿತರಿಸಿದರು.
ನಂತರ ಮಾತನಾಡಿದ ಅವರು, ನಾನು ಈ ಹಿಂದೆ ದೇವಸ್ಥಾನಕ್ಕೆ ಬಂದಾಗ ಇನ್ನೂ ಜೀರ್ಣೋದ್ಧಾರವಾಗಿರಲಿಲ್ಲ. ಆಗ ಏನಾದರೂ ಸಹಾಯ ಮಾಡಬೇಕು ಅಂದುಕೊಂಡಿದ್ದೆ. ಈಗ ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡಿದ್ದು, ಹಂತ ಹಂತವಾಗಿ ಅಭಿವೃದ್ಧಿಗೆ ಅನುದಾನ ನೀಡುವ ಕುರಿತು ಭರವಸೆ ನೀಡಿದರು.
ಮಾತೋಶ್ರೀ ಡಾ. ಹುಲಿಗೆಮ್ಮ ಪೋಸಾ ಅಮ್ಮನವರು ಸಾನ್ನಿಧ್ಯ ವಹಿಸಿದ್ದರು.