ಧಾರವಾಡ: ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ನಗರದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಸಮಿತಿಯ ಅಧ್ಯಕ್ಷ ಅರವಿಂದ ಏಗನಗೌಡರ ಅಧ್ಯಕ್ಷತೆಯಲ್ಲಿ ಜರುಗಿತು.
ಸಭೆಯಲ್ಲಿ ಧಾರವಾಡ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ ಗೌರವ ಉಪಸ್ಥಿತರಿದ್ದು ಮಾತನಾಡಿದರು.
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವಲ್ಲಿ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ ಎಂದು ಜಿಲ್ಲಾಧ್ಯಕ್ಷ ಎಸ್.ಆರ್. ಪಾಟೀಲ ತಿಳಿಸಿ ತಾಲೂಕು ಸಮಿತಿಯನ್ನು ಶ್ಲಾಘಿಸಿದರು.
ಅಧ್ಯಕ್ಷತೆ ವಹಿಸಿದ್ದ ತಾಲೂಕು ಸಮಿತಿ ಅಧ್ಯಕ್ಷ ಅರವಿಂದ ಏಗನಗೌಡರ ಮಾತನಾಡಿ, "ಪಂಚ ಗ್ಯಾರಂಟಿ ಯೋಜನೆಗಳು ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ ಸರ್ಕಾರಕ್ಕೆ ಒಳ್ಳೆಯ ಹೆಸರು ತಂದುಕೊಟ್ಟಿವೆ. ಯೋಜನೆಗಳು ಇನ್ನೂ ಎರಡು ವರ್ಷ ಮುಂದುವರಿಯಲಿವೆ. ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ತಲುಪಿಸುವ ಜವಾಬ್ದಾರಿ ಅಧಿಕಾರಿಗಳು ಮತ್ತು ಸಮಿತಿ ಸದಸ್ಯರ ಮೇಲಿದೆ. ಈ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದರು.
ಸದಸ್ಯ ಕಾರ್ಯದಶಿರ್ ಗಂಗಾಧರ ಕಂದಕೂರ, ಸಮಿತಿ ಸದಸ್ಯರಾದ ಚಂದ್ರಶೇಖರ ಕದಂ, ಪರಮೇಶ್ವರ ಕರಿಕಟ್ಟಿ, ರಾಜೇಶ ಚವ್ಹಾಣ, ಸಿದ್ದಪ್ಪ ಅಗಸಿಮನಿ, ಕಲಾವತಿ ಭೀಮಕ್ಕನವರ, ಮೈಲಾರಗೌಡ ಪಾಟೀಲ, ಪರಮೇಶ್ವರ ಕಾಳೆ, ಕಾತಿರ್ಕ ಗೋಕಾಕ ಹಾಗೂ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಅನುಷ್ಠಾನ ಅಧಿಕಾರಿಗಳು ಉಪಸ್ಥಿತರಿದ್ದರು