ಧಾರವಾಡ: ಇಲ್ಲಿನ ಕೆಇ ಬೋರ್ಡ್ ಸಂಸ್ಥೆಯ ಕರ್ನಾಟಕ ಹೈಸ್ಕೂಲಿನ 1997 ಬ್ಯಾಚಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪುನರ್ಮಿಲನ ಹಾಗೂ ಗುರುವಂದನೆ ಕಾರ್ಯಕ್ರಮ ಜೂ.28 ರಂದು ಬೆಳಗ್ಗೆ 9.30 ಕ್ಕೆ ಕರ್ನಾಟಕ ಹೈಸ್ಕೂಲಿನಲ್ಲಿ ನಡೆಯಲಿದೆ. ಕೆಇ ಬೋರ್ಡ್ ಸಂಸ್ಥೆಯ ಅಧ್ಯಕ್ಷರಾದ ಶ್ರೀಕಾಂತ ಪಾಟೀಲ ಅಧ್ಯಕ್ಷತೆ ವಹಿಸುವರು. ನಿವೃತ್ತ ಪ್ರಾಚಾರ್ಯ ಎನ್.ಜಿ. ಗಲಗಲಿ ಕಾರ್ಯಕ್ರಮ ಉದ್ಘಾಟಿಸುವರು. ಕಾರ್ಯಕ್ರಮದಲ್ಲಿ ಶಾಲೆಯ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಗುರುವಂದನೆ ಸಲ್ಲಿಸಲಾಗುವುದು. 1997 ನೇ ಸಾಲಿನ ನೂರಾರು ವಿದ್ಯಾರ್ಥಿ-ವಿದ್ಯಾರ್ಥಿನಿಯರು ನಿವೃತ್ತ ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಗುರುವಂದನಾ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.