har ghar tiranga ತ್ಯಾಗ, ಬಲಿದಾನ ಸ್ಮರಿಸಲು ಸ್ಫೂರ್ತಿ

ಹುಬ್ಬಳ್ಳಿಯಲ್ಲಿ ಭಾನುವಾರ ಏರ್ಪಡಿಸಿದ್ದ har ghar tirangaತ್ರಿವರ್ಣಯಾತ್ರೆ ಬೈಕ್ ರ‌್ಯಾಲಿಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ, ಎಂ ಎಲ್‌ಸಿ ಲಿಂಗರಾಜ ಪಾಟೀಲ, ಮುತ್ತು ಹೆಬ್ಬಳ್ಳಿ, ರಾಜು ಕಾಳೆ, ಇತರರಿದ್ದರು.
ಹುಬ್ಬಳ್ಳಿಯಲ್ಲಿ ಭಾನುವಾರ ಏರ್ಪಡಿಸಿದ್ದ har ghar tirangaತ್ರಿವರ್ಣಯಾತ್ರೆ ಬೈಕ್ ರ‌್ಯಾಲಿಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ, ಎಂ ಎಲ್‌ಸಿ ಲಿಂಗರಾಜ ಪಾಟೀಲ, ಮುತ್ತು ಹೆಬ್ಬಳ್ಳಿ, ರಾಜು ಕಾಳೆ, ಇತರರಿದ್ದರು.
Published on

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವಮೋರ್ಚಾ ಘಟಕದ ವತಿಯಿಂದ

har ghar tiranga

‘ಹರ್ ಘರ್ ತಿರಂಗಾ’ ಅಭಿಯಾನದ ಭಾಗವಾಗಿ ತ್ರಿವರ್ಣಯಾತ್ರೆ ಬೈಕ್ ರ‌್ಯಾಲಿಯನ್ನು ನಗರದಲ್ಲಿ ಭಾನುವಾರ ಏರ್ಪಡಿಸಲಾಗಿತ್ತು.

ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವ ವಹಿಸಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ಫಲವಾಗಿ ಹರ್ ಘರ್ ತಿರಂಗಾ ಅಭಿಯಾನ ರೂಪುಗೊಂಡಿತು. ಇಂದ ಮನೆ ಮನೆಯಲ್ಲಿಯೂ ತ್ರಿವರ್ಣ ಧ್ವಜವು ರಾರಾಜಿಸುವಂತಾಯಿತು. ಭಾರತೀಯರ ಮನದಲ್ಲಿ ದೇಶಪ್ರೇಮ ಜಾಗೃತಗೊಳಿಸಿದಂತಾಯಿತು ಎಂದರು.
ರಾಷ್ಟ್ರಧ್ವಜವು ನಮ್ಮ ದೇಶದ ಹೆಮ್ಮೆ. ಸ್ವಾತಂತ್ರೃ ಹೋರಾಟಗಾರರ ತ್ಯಾಗ, ಬಲಿದಾನಗಳನ್ನು ಸ್ಮರಿಸಲು ಸ್ಫೂರ್ತಿಯ ಸಂಕೇತವಾಗಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಲಿಂಗರಾಜ ಪಾಟೀಲ, ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ಮುತ್ತು ಹೆಬ್ಬಳ್ಳಿ, ಕ್ಷೇತ್ರದ ಅಧ್ಯಕ್ಷ ರಾಜು ಕಾಳೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಸಂತ ನಾಡಜೋಶಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರೀತಮ್ ಅರಕೇರಿ ಇತರರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net