

ಪ್ರಮುಖ ಮುಖ್ಯಾಂಶಗಳು
ಹುಬ್ಬಳ್ಳಿ:
HD development
ಹುಬ್ಬಳ್ಳಿಯನ್ನು ರಾಜ್ಯದ ಎರಡನೇ ರಾಜಧಾನಿ ಎಂದು ಕೇವಲ ಭಾಷಣಗಳಲ್ಲಿ ಉಲ್ಲೇಖಿಸುವುದರಿಂದ ಅಭಿವೃದ್ಧಿ ಸಾಧ್ಯವಿಲ್ಲ. ಅದಕ್ಕೆ ತಕ್ಕಂತೆ ಆಧುನಿಕ ನಗರ ಯೋಜನೆ
ಮಾಡಬೇಕೆಂದು ಕೆಎಲ್ಇ ಸಂಸ್ಥೆಯ ಮಾಜಿ ನಿರ್ದೇಶಕ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಮಾಜಿ ಅಧ್ಯಕ್ಷ ಶಂಕರಣ್ಣ ಮುನವಳ್ಳಿ ಹೇಳಿದ್ದಾರೆ.
ಸುಗಮ ಸಾರಿಗೆ ವ್ಯವಸ್ಥೆ, ಪಾರ್ಕಿಂಗ್
ಸೌಕರ್ಯ, ಉತ್ತಮ ರಸ್ತೆಗಳು, ಸುಂದರ ಪಾದಚಾರಿ ಮಾರ್ಗಗಳು, ಸಾರ್ವಜನಿಕ ಶೌಚಾಲಯಗಳು, ಸ್ವಚ್ಛತೆ ಹಾಗೂ ಸುಸಜ್ಜಿತ ವಾಣಿಜ್ಯ ಪ್ರದೇಶಗಳನ್ನು ನಿರ್ಮಾಣ ಮಾಡಬೇಕು.