ಕೃಷ್ಣ ಪವಾರ್ ಅವರು ಖಾಸಗಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಾಕ್ಷಿ ಹೇಳಲು ಹುಬ್ಬಳ್ಳಿಯ ಸಿವಿಲ್ ಕೋರ್ಟ್‌ಗೆ ಹಾಜರಾಗಿದ್ದರು. ಕೋರ್ಟ್ ಕಟಕಟೆಯಲ್ಲಿ ನ್ಯಾಯಾಧೀಶರ ಎದುರು ಸಾಕ್ಷಿ ನೀಡುತ್ತಿದ್ದ ಸಂದರ್ಭದಲ್ಲೇ ಅಕಸ್ಮಿಕವಾಗಿ ಎದೆನೋವು ಕಾಣಿಸಿಕೊಂಡು, ಕ್ಷಣಾರ್ಧದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ನ್ಯಾಯಾಲಯದಲ್ಲಿದ್ದವರು ಸಹಾಯಕ್ಕೆ ಧಾವಿಸಿದರೂ ಹೃದಯಾಘಾತದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅನಿರೀಕ್ಷಿತ ಘಟನೆಯಿಂದ ನ್ಯಾಯಾಲಯ ಆವರಣದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿತ್ತು. ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಡಿಸಿಪಿ ಮಹಾನಿಂಗ ನಂದಗಾಂವಿ ಭೇಟಿ ನೀಡಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.