water: ಅಣ್ಣಿಗೇರಿ ಪಟ್ಟಣದಲ್ಲಿ ನೀರೋ ನೀರು...

ಅಣ್ಣಿಗೇರಿಯಲ್ಲಿ ಸುರಿದ ಮಳೆಯಿಂದಾಗಿ ಪಟ್ಟಣದ ವಿವಿಧ ಬಡಾವಣೆಗಳಲ್ಲಿ ನೀರು ನುಗ್ಗಿರುವುದನ್ನು ಶಾಸಕ ಎನ್.ಎಚ್. ಕೋನರಡ್ಡಿ, ಜಿಲ್ಲಾಧಿಕಾರಿ ಆರ್. ಸ್ನೇಹಲ್ ಸೇರಿದಂತೆ ಅಧಿಕಾರಿಗಳ ತಂಡ ಗುರುವಾರ ಪರಿಶೀಲನೆ ನಡೆಸಿತು.
ಅಣ್ಣಿಗೇರಿಯಲ್ಲಿ ಸುರಿದ ಮಳೆಯಿಂದಾಗಿ ಪಟ್ಟಣದ ವಿವಿಧ ಬಡಾವಣೆಗಳಲ್ಲಿ ನೀರು ನುಗ್ಗಿರುವುದನ್ನು ಶಾಸಕ ಎನ್.ಎಚ್. ಕೋನರಡ್ಡಿ, ಜಿಲ್ಲಾಧಿಕಾರಿ ಆರ್. ಸ್ನೇಹಲ್ ಸೇರಿದಂತೆ ಅಧಿಕಾರಿಗಳ ತಂಡ ಗುರುವಾರ ಪರಿಶೀಲನೆ ನಡೆಸಿತು.
Published on

ಪ್ರಮುಖ ಮುಖ್ಯಾಂಶಗಳು

  • ಭಾರಿ ಮಳೆಗೆ ಪಟ್ಟಣದ ವಿವಿಧ ಬಡಾವಣೆಗಳು ಜಲಾವೃತ
  • ಶಾಸಕ, ಜಿಲ್ಲಾಧಿಕಾರಿ ಸ್ಥಳ ಪರಿಶೀಲನೆ
  • ಪಟ್ಟಣಕ್ಕೆ ನೀರು ಬರದಂತೆ ನೋಡಿಕೊಳ್ಳಲು ಜಿಲ್ಲಾಧಿಕಾರಿ ಸೂಚನೆ
ಅಣ್ಣಿಗೇರಿ: ತಾಲೂಕಿನಲ್ಲಿ ಸುರಿದ ಭಾರಿ ಮಳೆಯಿಂದ ಪಟ್ಟಣದ ವಿವಿಧ ಪ್ರದೇಶಗಳು (water) ಜಲಾವೃತಗೊಂಡಿದ್ದನ್ನು ಶಾಸಕ ಎನ್.ಎಚ್. ಕೋನರಡ್ಡಿ ಹಾಗೂ ಜಿಲ್ಲಾಧಿಕಾರಿ ಆರ್.ಸ್ನೇಹಲ್ ಸೇರಿದಂತೆ ಅಧಿಕಾರಿಗಳ ತಂಡ ಗುರುವಾರ ಪರಿಶೀಲನೆ ನಡೆಸಿತು.
ಹೆದ್ದಾರಿ ಪ್ರಾಧಿಕಾರದಿಂದ ನಿರ್ಮಿಸಲಾದ ಬೈಪಾಸ್ ರಸ್ತೆ, ಹಾಗೂ ರೈಲ್ವೆ ಇಲಾಖೆಯಿಂದ ಕೈಗೊಳ್ಳಲಾದ ಅವೈಜ್ಞಾನಿಕ ಕಾಮಗಾರಿ ಪರಿಣಾಮ ಡಾ. ಬಿ.ಆರ್. ಅಂಬೇಡ್ಕರ್ ನಗರದಲ್ಲಿ ಗಟಾರ ಹಾಗೂ ಸರ್ವಿಸ್ ರಸ್ತೆ ನಿರ್ಮಿಸದ ಕಾರಣ ಪಟ್ಟಣದ ಕೆಲ ಪ್ರದೇಶ ಜಲಾವೃತವಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ರೈಲ್ವೆ ಇಲಾಖೆಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಮಳೆಯಿಂದಾಗುವ ಅನಾಹುತಗಳನ್ನು ತಡೆಯಬೇಕು ಎಂದು ಶಾಸಕ ಕೋನರಡ್ಡಿ ಆಗ್ರಹಿಸಿದರು.
ಜಿಲ್ಲಾಧಿಕಾರಿ ಆರ್. ಸ್ನೇಹಲ್ ಮಾತನಾಡಿ, ಹೆದ್ದಾರಿ ಪ್ರಾಧಿಕಾರ ಹಾಗೂ ರೈಲ್ವೆ ಅಧಿಕಾರಿಗಳು ಕಾಮಗಾರಿ ಕೈಗೊಳ್ಳುವ ಮೊದಲು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಅಂದಾಜು ಪಟ್ಟಿ ತಯಾರಿಸಬೇಕಿತ್ತು. ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಿ ಪಟ್ಟಣಕ್ಕೆ ನೀರು ಬರದಂತೆ ನೋಡಿಕೊಳ್ಳಬೇಕು ಎಂದರು.
ನವಲಗುಂದ ಅಣ್ಣಿಗೇರಿ ಹಳೆ ರಸ್ತೆ, ಹೆಬಸೂರ ಪ್ಲಾಟ್, ಅಂಬಿಕಾ ನಗರ ಪ್ಲಾಟ್, ಎಸ್.ಎಂ. ಪಾಟೀಲ ಸಭಾ ಭವನದ ಆವರಣ ಹಾಗೂ ನಗರದ ಹಲವು ಕಡೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬರುವದನ್ನು ತಡೆಯಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಪುರಸಭೆ ಅಧ್ಯಕ್ಷ ಶಿವಾನಂದ ಬೆಳಗಾರ, ಉಪ ವಿಭಾಗಾಧಿಕಾರಿ, ಶಾಲಂ ಹುಸೇನ, ಭುವನೇಶಕುಮಾರ, ರೈಲ್ವೆ ಅಧಿಕಾರಿಗಳಾದ ಶ್ರೀಕಾಂತ, ಬಸವರಾಜ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ಕಾರ್ಯನಿರ್ವಾಹಕ ಇಂಜಿನಿಯರ್ ವಿ.ಎನ್. ಪಾಟೀಲ, ಸತೀಶ ನಾಗನೂರ, ಸೋಮನಗೌಡ ಪಾಟೀಲ, ಮಂಜುನಾಥ ದಾಸಪ್ಪನವರ, ರವೀದ್ರಗೌಡ ಪಾಟೀಲ, ಮುಖ್ಯಾಧಿಕಾರಿ ವೈ.ಜಿ. ಗದ್ದಿಗೌಡರ, ಈಶ್ವರ ಕಾಳಪ್ಪನವರ, ಭಗವಂತ ಪುಟ್ಟಣ್ಣವರ, ಗುರುಸಿದ್ದಪ್ಪ ಕೊಪ್ಪದ, ಬಸಪ್ಪ ಕರ್ಲವಾಡ, ದಾವಲಸಾಬ ದರವಾನ, ಮಂಜುನಾಥ ಗಾಣಿಗೇರ, ಪಮ್ಮಣ್ಣ ಹಣಸಿ, ಮುದಕಣ್ಣ ಮುಂಡಾಸ, ವೆಂಕಟೇಶ ಕಡೆಮನಿ, ಮಲ್ಲಿಕಾರ್ಜುನ ಮಂಡಾಸ, ಮುತ್ತಣ್ಣ ಹೊಸಳ್ಳಿ, ಮಂಜು ಕುರ್ತಕೋಟಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net