ವಿದ್ಯುತ್ ಕಂಬಗಳು, ಟ್ರಾನ್ಸ್ಫಾರ್ಮರ್(ಟಿಸಿ)ಗಳಿಗೆ ಬ್ಯಾನರ್, ಪೋಸ್ಟರ್ ಮತ್ತು ಫಲಕಗಳನ್ನು ಕಟ್ಟಬಾರದು. ಗಣೇಶನ ವಿಗ್ರಹ ವಿಸರ್ಜನೆ ದಿನ ವಿದ್ಯುತ್ ತಂತಿಗಳಿಗೆ ತಾಗುವ ರೀತಿಯಲ್ಲಿ ಅತೀ ಎತ್ತರದ ಧ್ವಜ, ಕಟೌಟ್ಗಳನ್ನು ಕಟ್ಟಬಾರದು. ಗಣಪತಿ ವಿಸರ್ಜನಾ ಮೆರವಣಿಗೆ ನಡೆಯುವ ಬೀದಿಗಳಲ್ಲಿ ವಿದ್ಯುತ್ ಲೈನ್ಗಳ ಅಡಚಣೆ ಇದ್ದಲ್ಲಿ ಸಂಬಂಧಿಸಿದ ಹೆಸ್ಕಾಂ ಕಚೇರಿಯ ಗಮನಕ್ಕೆ ತರಬೇಕು.