ಸಚಿವ ಪ್ರಲ್ಹಾದ ಜೋಶಿ ಮನವಿಗೆ ಸ್ಪಂದಿಸಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್
ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಪ್ರಯೋಜನ ಆಗಲಿದೆ.
ತ್ವರಿತ ಪ್ರಯಾಣ, ಸಂಪರ್ಕ ಸಾಧ್ಯವಾಗಲಿದೆ.
ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರ ಒತ್ತಾಸೆ ಮೇರೆಗೆ ಕರ್ನಾಟಕದಲ್ಲಿ ಬೆಂಗಳೂರು ಮತ್ತು ಪುಣೆ ಮಧ್ಯೆ ಹೈ ಸ್ಪೀಡ್ ರೈಲು ಕಾರಿಡಾರ್ಗೆ ಚಿಂತನೆ ನಡೆದಿದ್ದು, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಪ್ರಲ್ಹಾದ ಜೋಶಿ ಭೇಟಿ: ಬೆಂಗಳೂರು ಮತ್ತು ಪುಣೆ ಮಧ್ಯೆ ಹೈ ಸ್ಪೀಡ್ ರೈಲು ಕಾರಿಡಾರ್ ನಿಮಾಣಕ್ಕಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಬುಧವಾರ ಬೆಳಗ್ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ, ಮನವಿ ಮಾಡಿದ್ದಾರೆ. ರೈಲ್ವೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಬೆಂಗಳೂರá--ಪುಣೆ ಮಧ್ಯೆ ಹೈ ಸ್ಪೀಡ್ ರೈಲು ಕಾರಿಡಾರ್ ನಿರ್ಮಾಣವಾದಲ್ಲಿ ಕರ್ನಾಟಕದ ಬಹುತೇಕ ಪ್ರದೇಶದ ಒಟ್ಟಾರೆ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಸಚಿವ ಪ್ರಲ್ಹಾದ ಜೋಶಿ ರೈಲ್ವೆ ಸಚಿವರಿಗೆ ಮನವರಿಕೆ ಮಾಡಿದ್ದಾರೆ.
ಈ ರೈಲು ಕಾರಿಡಾರ್ ನಿರ್ಮಾಣದಿಂದ ಮಧ್ಯ ಕರ್ನಾಟಕ ಮತ್ತು ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಪ್ರಯೋಜನ ಆಗಲಿದೆ. ರಾಜ್ಯದ ಬೆಳಗಾವಿ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಹೆಚ್ಚಿನ ಅನುಕೂಲವಾಗುತ್ತದೆ.
ಪುಣೆಯಿಂದ ಕರ್ನಾಟಕದ 6-7 ಜಿಲ್ಲೆಗಳಿಗೆ ತ್ವರಿತ ಪ್ರಯಾಣ, ಸಂಪರ್ಕ ಸಾಧ್ಯವಾಗಲಿದೆ. ಹಾಗಾಗಿ, ಇದೊಂದು ಹೊಸ ಹೈ ಸ್ಪೀಡ್ ರೈಲು ಕಾರಿಡಾರ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಸಚಿವ ಪ್ರಲ್ಹಾದ ಜೋಶಿ ಒತ್ತಾಯಿಸಿದ್ದಾರೆ.