ಹಳೇ ಹುಬ್ಬಳ್ಳಿ ಆಸ್ಪತ್ರೆ (Hospital Opening) ಶೀಘ್ರ ಲೋಕಾರ್ಪಣೆ

ಹಳೇ ಹುಬ್ಬಳ್ಳಿಯಲ್ಲಿ  (Hospital Opening)ನಿರ್ವಣವಾಗುತ್ತಿರುವ 100 ಹಾಸಿಗೆಗಳ ಆಸ್ಪತ್ರೆಗೆ ಶಾಸಕ ಪ್ರಸಾದ ಅಬ್ಬಯ್ಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹಳೇ ಹುಬ್ಬಳ್ಳಿಯಲ್ಲಿ (Hospital Opening)ನಿರ್ವಣವಾಗುತ್ತಿರುವ 100 ಹಾಸಿಗೆಗಳ ಆಸ್ಪತ್ರೆಗೆ ಶಾಸಕ ಪ್ರಸಾದ ಅಬ್ಬಯ್ಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Published on
ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ 100 ಹಾಸಿಗೆಗಳ ಆಸ್ಪತ್ರೆಯ (Hospital Opening)ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಶೀಘ್ರವೇ ಜನರ ಸೇವೆಗೆ ಸಿದ್ಧವಾಗಲಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಂದ ಲೋಕಾರ್ಪಣೆಗೊಳ್ಳಲಿದೆ ಎಂದು ಸ್ಲಂ ಬೋರ್ಡ್ ಅಧ್ಯಕ್ಷ, ಶಾಸಕ ಪ್ರಸಾದ ಅಬ್ಬಯ್ಯ ತಿಳಿಸಿದರು.
ಆಸ್ಪತ್ರೆಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಆಸ್ಪತ್ರೆಯ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಇನ್ನೂಳಿದ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಆಸ್ಪತ್ರೆಯಲ್ಲಿ ಮಧುಮೇಹ, ರಕ್ತದೊತ್ತಡ, ಹೃದಯ ಖಾಯಿಲೆ, ಗರ್ಭಿಣಿಯರ ಆರೈಕೆ, ಚಿಕ್ಕಮಕ್ಕಳ ಆರೈಕೆ, ಶಸ್ತ್ರ ಚಿಕಿತ್ಸೆ, ಕಣ್ಣಿನ ಆರೈಕೆ, ಕ್ಷಯರೋಗ, ಕುಷ್ಠರೋಗ, ಡೆಂಗಿ, ಮಲೇರಿಯಾ ಇನ್ನು ಮುಂತಾದ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಒದಗಿಸಲಾಗುವುದು ಎಂದು ಹೇಳಿದರು.
ಈಗಾಗಲೇ ಹು-ಧಾ ಪೂರ್ವ ಕ್ಷೇತ್ರದಲ್ಲಿ 12 ಆರೋಗ್ಯ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಮತ್ತೆ 5 ಹೊಸ ನಮ್ಮ ಕ್ಲಿನಿಕಗಳಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅವೂ ಕೂಡ ಘೊಷಣೆ ಆಗಲಿವೆ. ಇದಲ್ಲದೆ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಲಾಗಿದ್ದು, ಬಿಡನಾಳದಲ್ಲಿ ನೂತನ ಸರ್ಕಾರಿ ಪದವಿ ಪೂರ್ವ ಕಾಲೇಜ್ ಪ್ರಾರಂಭವಾಗಿದ್ದು, ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳು ಆರಂಭವಾಗಿವೆ. ಕಾಲೇಜಿನ ನೂತನ ಕಟ್ಟಡವನ್ನು ಮುಖ್ಯಮಂತ್ರಿಯವರು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ಅಧೀಕ್ಷಕ ಇಂಜಿನಿಯರ್ ಆರ್. ವಿಜಯಕುಮಾರ, ಲೋಕೋಪಯೋಗಿ ಇಂಜಿನಿಯರ್ ಗೀತಾ ಚವ್ಹಾಣ, ಪಾಲಿಕೆ ಮುಖ್ಯ ಆರೋಗ್ಯ ಅಧಿಕಾರಿ ಡಾ. ಶ್ರೀಧರ ದಂಡಪ್ಪನವರ, ಎಇಇಗಳಾದ ಹರೀಶ, ನಾಗರಾಜ, ಪಾಲಿಕೆ ಮಾಜಿ ಸದಸ್ಯ ಅಲ್ತಾಫ್ ಕಿತ್ತೂರು, ನಾಮನಿರ್ದೇಶಿತ ಸದಸ್ಯ ಸಂತೋಷ ಪೂಜಾರ, ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net