ಪತ್ನಿಯ ಹತ್ಯೆಗೈದು ಪತಿ ಆತ್ಮಹತ್ಯೆ

ಮೌಲಾಸಾಬ್​- ಸಲ್ಮಾ
ಮೌಲಾಸಾಬ್​- ಸಲ್ಮಾ
Published on

ಧಾರವಾಡ:

ಪತ್ನಿಯನ್ನು ಕೊಂದ ಪತಿ ತಾನೂ ನೇಣಿಗೆ ಶರಣಾದ ಘಟನೆ ತಾಲೂಕಿನ ಗರಗ ಗ್ರಾಮದಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಮೌಲಾಸಾಬ್​ (28) ತನ್ನ ಪತ್ನಿ ಸಲ್ಮಾ (21) ಎಂಬುವರನ್ನು ಕೊಲೆ ಮಾಡಿ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೂಲಿ ಕೆಲಸ ಮಾಡುತ್ತಿದ್ದ ಮೌಲಾಸಾಬ್​ ವಿವಾಹ 3 ವರ್ಷಗಳ ಹಿಂದೆ ಸಲ್ಮಾ ಜತೆ ನಡೆದಿತ್ತು. ಒಂದೂವರೆ ವರ್ಷದ ಮಗುವಿದ್ದು, ಕೌಟುಂಬಿಕ ವಿಚಾರವಾಗಿ ಇಬ್ಬರ ಮಧ್ಯೆ ಜಗಳ ನಡೆಯುತ್ತಿತ್ತು. ಗುರುವಾರ ರಾತ್ರಿ ಇಬ್ಬರ ಮಧ್ಯೆ ಜಗಳ ವಿಕೋಪಕ್ಕೆ ತಿರುಗಿ ಮೌಲಾಸಾಬ್​ ಪತ್ನಿಯನ್ನು ಕೊಲೆಗೈದು ತಾನೂ ನೇಣು ಹಾಕಿಕೊಂಡಿದ್ದಾನೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.
ಎಸ್​ಪಿ ಗುಂಜನ್​ ಆರ್ಯ ಹಾಗೂ ಪೊಲೀಸ್​ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇಬ್ಬರ ಮೃತದೇಹಗಳನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ. ಗರಗ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net