ನಾನೂ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ aspirant

aspirant  ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ  ಶಾಸಕ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಪ್ರಸಾದ ಅಬ್ಬಯ್ಯ.
aspirant ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಪ್ರಸಾದ ಅಬ್ಬಯ್ಯ.
Published on

ಪ್ರಮುಖ ಮುಖ್ಯಾಂಶಗಳು

  • ಸಚಿವ ಸಂಪುಟ ವಿಸ್ತರಣೆಗೆ ಕುರಿತು ಕರೆದಿದ್ದಾರೆ ಎಂಬುದು ಸ್ಪಷ್ಟತೆಯಿಲ್ಲ.
  • ಹೈಕಮಾಂಡ್ ಯಾವ ಕಾರಣಕ್ಕೆ ದೆಹಲಿಗೆ ಕರಿಸಿಕೊಂಡಿದ್ದಾರೆ ಎಂಬುದು ಗೊತ್ತಿಲ್ಲ
  • ಅಧಿಕಾರ ಹಸ್ತಾಂತರದ ಪ್ರಶ್ನೆಯೇ ಇಲ್ಲ.
ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರನ್ನು ಹೈಕಮಾಂಡ್ ಯಾವ ಕಾರಣಕ್ಕೆ ದೆಹಲಿಗೆ ಕರಿಸಿಕೊಂಡಿದ್ದಾರೆ ಎಂಬುದು ಗೊತ್ತಿಲ್ಲ ಎಂದರು.
ರಾಜ್ಯಸಭೆ ಸ್ಥಾನ, ಎಂಎಲ್​ಸಿ ನಾಮನಿರ್ದೇಶನ ಚರ್ಚೆಗೆ ಸಿಎಂ ಹಾಗೂ ಡಿಸಿಎಂ ಅವರನ್ನು ದೆಹಲಿಗೆ ಕರೆದಿರುವ ಸಾಧ್ಯತೆಯೂ ಇದೆ. ಸಚಿವ ಸಂಪುಟ ವಿಸ್ತರಣೆಗೆ ಕುರಿತು ಕರೆದಿದ್ದಾರೆ ಎಂಬುದು ಸ್ಪಷ್ಟತೆಯಿಲ್ಲ. ಸಚಿವ ಸಂಪುಟ ವಿಸ್ತರಣೆಯಾಗುತ್ತದೆ ಎಂದರು.
ಸಹಜವಾಗಿ ಸಿಎಂ, ಡಿಸಿಎಂ ದೆಹಲಿಗೆ ಹೈಕಮಾಂಡ್ ಭೇಟಿಗೆ ಹೋದಾಗ ಒಂದಿಷ್ಟು ಜನ ಸಚಿವರು ಸಹ ಹೋಗುತ್ತಾರೆ.
ಹೀಗಾಗಿ, ಸಚಿವರು ದೆಹಲಿಗೆ ತೆರಳಿರುವುದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ. ಅಧಿಕಾರ ಹಸ್ತಾಂತರದ ಪ್ರಶ್ನೆಯೇ ಇಲ್ಲ. ಆ ಕುರಿತು ಮಾರೂ ಇಲ್ಲ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net