ಅಲೆಮಾರಿ ಜನಾಂಗದ ಬೆಳವಣಿಗೆಗೆ ಯತ್ನಿಸುವೆ development

development ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ಒಕ್ಕೂಟದಿಂದ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವ ಕಾರ್ಯಕ್ರಮದಲ್ಲಿ ಸಚಿವ ಸಂತೋಷ ಲಾಡ್ ಮಾತನಾಡಿದರು.
development ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ಒಕ್ಕೂಟದಿಂದ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವ ಕಾರ್ಯಕ್ರಮದಲ್ಲಿ ಸಚಿವ ಸಂತೋಷ ಲಾಡ್ ಮಾತನಾಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವ ಕಾರ್ಯಕ್ರಮದಲ್ಲಿ ಸಚಿವ ಸಂತೋಷ ಲಾಡ್ ಭರವಸೆ
ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ಒಕ್ಕೂಟದಿಂದ ನಗರದಲ್ಲಿ ಶನಿವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರಿಗೆ ರಾಜ್ಯ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ದೊರಕಿಸಿ ಕೊಡಲಾಗುವುದು. ಅಲೆಮಾರಿ ಜನಾಂಗದವರು ತಮ್ಮ ಸಮಾಜದ ಮುಂದಿನ ಪೀಳಿಗೆಗೆ ಸವಲತ್ತುಗಳನ್ನು ತಲುಪಿಸಬೇಕು. ಯಾವುದೇ ಸಮುದಾಯದ ಮೆರಿಟ್ ಹೊಂದಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ನೀಡಲಾಗುವುದು ಎಂದರು.
ವಿಧಾನ ಪರಿಷತ್ ಸದಸ್ಯ ಎಫ್.ಎಚ್.ಜಕ್ಕಪ್ಪನವರ ಮಾತನಾಡಿ, ಸಾಮಾಜಿಕ ನ್ಯಾಯಕ್ಕೆ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಭದ್ರ ಬುನಾದಿ ಹಾಕಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಜನಾಂಗದವರ ಏಳ್ಗಿಗೆಗೆ ಸಾಕಷ್ಟು ಶ್ರಮಿಸುತ್ತಿದ್ದಾರೆ. ಅಲೆಮಾರಿ ಜನಾಂಗದವರು ಮುನ್ನೆಲೆಗೆ ಬರಬೇಕು. ಅಲೆಮಾರಿ ಜನಾಂಗದವರಿಗೆ ಶಿಕ್ಷಣ ಬಹಳ ಅವಶ್ಯಕವಾಗಿದ್ದು, ಶಿಕ್ಷಣದಿಂದ ಸಮಾಜ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಹೇಳಿದರು.
ಆಶೀರ್ವಚನ ನೀಡಿದ ಕೂಡಲ ಸಂಗಮದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಸಮುದಾಯಗಳು ಅಸ್ತಿತ್ವ ಉಳಿಸಿಕೊಳ್ಳಬೇಕಾದರೆ ಸಂಘಟನೆ ಅಗತ್ಯ. ಶಿಕ್ಷಣ, ಸಂಘಟನೆ, ಹೋರಾಟದ ಮೂಲಕ ಸಮುದಾಯಕ್ಕೆ ಅಗತ್ಯ ಸೌಲಭ್ಯ ಪಡೆಯಬೇಕು ಎಂದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಬಜೆಟ್​ನಲ್ಲಿ ಕೋಟ್ಯಂತರ ರೂ. ಹಣ ಮೀಸಲಿಡುತ್ತವೆ. ಆದರೆ, ಆ ಹಣ ಎಲ್ಲಿ ಹೋಗುತ್ತದೆ ಎಂಬುದು ಸಹ ತಿಳಿಯುವುದಿಲ್ಲ. ಹಿಂದುಳಿದ ವರ್ಗಗಳು ಇದುವರೆಗೂ ಅಭಿವೃದ್ಧಿ ಹೊಂದಿಲ್ಲ. ಪ್ರತಿ ಸಮುದಾಯ ಅಭಿವೃದ್ಧಿ ಹೊಂದುವವರೆಗೆ ಭಾರತ ಬೆಳಗುತ್ತಿದೆ ಎಂಬ ಘೋಷವಾಕ್ಯಗಳಿಗೆ ಅರ್ಥ ಇರುವುದಿಲ್ಲ ಎಂದರು.
ಯಾದಗಿರಿಯ ಜಗದ್ಗುರು ವೇದ ವ್ಯಾಸಪೀಠ ಕರತಳ್ಳಿಯ ಬ್ರರ್ಹ¾ ರಾಜು ಗುರು ಸ್ವಾಮೀಜಿ, ಹುಬ್ಬಳ್ಳಿಯ ಅಮ್ಮಾ ಆರೂಢ ಗುರುಪೀಠ ಯೋಗಾಶ್ರಮದ ಪೀಠಾಧಿಪತಿ ರಾಘವೇಂದ್ರ ಗುರುಜಿ ಸಾನ್ನಿಧ್ಯ ವಹಿಸಿದ್ದರು.
ಶಿವಾಜಿ ಮಧೂರಕರ ಅಧ್ಯಕ್ಷತೆ ವಹಿಸಿದ್ದರು. ದಶರಥ ವಾಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆ.ರವೀಂದ್ರಶೆಟ್ಟಿ ಉಳಿದೊಟ್ಟು, ಪ್ರಕಾಶ ಎಂ., ಪ್ರತಾಪಕುಮಾರ ಜೋಗಿ, ಹುಲ್ಲಪ್ಪ ಜಾಡರ, ಶ್ರೀನಿವಾಸ ಕಟ್ಟಿಮನಿ, ನಾಗರಾಜ ಗಬ್ಬೂರ, ಹರೀಶ ಜಂಗ್ಲಿ, ಕಿರಣ ಗುರು, ಅಶೋಕ ಕಟ್ಟಿಮನಿ, ಕಿಶನ ಬಿಲಾನಾ, ಗೀತಾ ಮುದ್ದಿ, ಪ್ರೇಮಾ ಕಟ್ಟಿಮನಿ, ಮೂಕಾಂಬಿಕಾ ದಾಸ, ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net