police ಕ್ರೀಡಾಕೂಟದಿಂದ ಮನೋದೈಹಿಕ ಆರೋಗ್ಯ ವೃದ್ಧಿ

 ಹುಬ್ಬಳ್ಳಿಯ ಕಾರವಾರ ರಸ್ತೆಯ ಸಿಎಆರ್ ಕವಾಯತು ಮೈದಾನದಲ್ಲಿ ಶನಿವಾರ ಏರ್ಪಡಿಸಿದ್ದ police ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಹು-ಧಾ ಸಿಎಆರ್ ಘಟಕದ ತಂಡಕ್ಕೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ನೀಡಲಾಯಿತು.
ಹುಬ್ಬಳ್ಳಿಯ ಕಾರವಾರ ರಸ್ತೆಯ ಸಿಎಆರ್ ಕವಾಯತು ಮೈದಾನದಲ್ಲಿ ಶನಿವಾರ ಏರ್ಪಡಿಸಿದ್ದ police ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಹು-ಧಾ ಸಿಎಆರ್ ಘಟಕದ ತಂಡಕ್ಕೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ನೀಡಲಾಯಿತು.
Published on
ಹುಬ್ಬಳ್ಳಿ: ವಿವಿಧ ಇಲಾಖೆಗಳಿಗಿಂತ (police) ಪೊಲೀಸ್ ಇಲಾಖೆಯವರ ಮೇಲೆ ಕಾರ್ಯದೊತ್ತಡ ಹೆಚ್ಚಿಗೆ ಇರುತ್ತದೆ. ಹಾಗಾಗಿ ನಿಯಮಿತವಾಗಿ ಪೊಲೀಸ್ ಸಿಬ್ಬಂದಿ ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು. ಇದರಿಂದ ಮನೋದೈಹಿಕ ಆರೋಗ್ಯ ವೃದ್ಧಿಯಾಗಲಿದೆ ಎಂದು ವಾಕರ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ. ಅಭಿಪ್ರಾಯಪಟ್ಟರು.
ಹು-ಧಾ ಪೊಲೀಸ್ ಆಯುಕ್ತಾಲಯದಿಂದ ಇಲ್ಲಿಯ ಕಾರವಾರ ರಸ್ತೆಯ ಸಿಎಆರ್ ಕವಾಯತು ಮೈದಾನದಲ್ಲಿ ಶನಿವಾರ ಏರ್ಪಡಿಸಿದ್ದ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಗೆದ್ದವರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.
ಬೇರೆ ಇಲಾಖೆಯಲ್ಲಿ ನಿಯಮಿತವಾಗಿ ಕ್ರೀಡಾಕೂಟಗಳನ್ನು ಆಡುವುದಿಲ್ಲ. ಪೊಲೀಸ್ ಮತ್ತು ಅರಣ್ಯ ಇಲಾಖೆಯಲ್ಲಿ ಶಿಸ್ತುಬದ್ಧವಾಗಿ ಕ್ರೀಡಾಕೂಟಗಳನ್ನು ಆಯೋಜಿಸಲಾಗುತ್ತಿದೆ. ತಮ್ಮ ಕುಟುಂಬ ನಿರ್ವಹಣೆ ಜತೆಗೆ ಸಾರ್ವಜನಿಕ ಸುವ್ಯವಸ್ಥೆ ಕಾಪಾಡುವ ಹೊಣೆ ಪೊಲೀಸರ ಮೇಲಿದೆ. ಹಾಗಾಗಿ ಪೊಲೀಸರು ಕ್ರೀಡಾಕೂಟ, ವ್ಯಾಯಾಮ, ಯೋಗದಂಥ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಆಗಾಗ ಸೋತು ಗೆದ್ದಂಥವರ ಪುಸ್ತಕಗಳನ್ನು ಓದಿ ಮನೋಸ್ಫೂರ್ತಿ ಪಡೆಯಬೇಕು ಎಂದು ಸಲಹೆ ನೀಡಿದರು.
ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಕ್ರೀಡಾಕೂಟದಲ್ಲಿ ಪೊಲೀಸರು ಮತ್ತವರ ಕುಟುಂಬದವರೆಲ್ಲರೂ ಭಾಗವಹಿಸಿ ಸಂಭ್ರಮ ಪಟ್ಟರು. ಸಿಎಆರ್‌ನವರು ಅತ್ಯುತ್ತಮ ಪ್ರದರ್ಶನ ನೀಡಿ ಬಹುಮಾನಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಇತರ ವಿಭಾಗದವರೂ ಈ ನಿಟ್ಟಿನಲ್ಲಿ ಪ್ರೇರಣೆ ಪಡೆಯಬೇಕು. ವರ್ಷದ ಮೂರು ತಿಂಗಳಿಗೊಮ್ಮೆ ಕ್ರಿಕೆಟ್, ಕಬಡ್ಡಿ, ವಾಲಿಬಾಲ್ ಸೇರಿದಂತೆ ಇತರ ಕ್ರೀಡಾಕೂಟಗಳನ್ನು ಆಯುಕ್ತಾಲಯದಿಂದ ಆಯೋಜಿಸುವ ವ್ಯವಸ್ಥೆ ಮಾಡಲಾಗುವುದು ಎಂದರು.
ಹು-ಧಾ ಸಿಎಆರ್ ಘಟಕದ ತಂಡವು ಸಮಗ್ರ ವೀರಾಗ್ರಣಿ ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಪುರುಷರ ವೈಯಕ್ತಿಕ ವೀರಾಗ್ರಣಿ ವಿಭಾಗದಲ್ಲಿ ಧಾರವಾಡದ ವೆಂಕಟೇಶ ನಾಯ್ಕ, ಮಹಿಳೆಯರ ವೈಯಕ್ತಿಕ ವೀರಾಗ್ರಣಿ ವಿಭಾಗದಲ್ಲಿ ಸುಷ್ಮಿತಾ ಪಾಟೀಲ ಬಹುಮಾನ ಪಡೆದರು. ಇನ್ನುಳಿದಂತೆ ವಿವಿಧ ವಿಭಾಗದಲ್ಲಿ ಗೆದ್ದವರಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ನೀಡಲಾಯಿತು.
ಡಿಸಿಪಿಗಳಾದ ಮಹಾನಿಂಗ ನಂದಗಾವಿ, ಸಿ.ಆರ್. ರವೀಶ, ಧಾರವಾಡ ಎಸಿಪಿ ಪ್ರಶಾಂತ ಸಿದ್ದನಗೌಡರ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net