(inamveerapura) ಗಾಯಾಳುಗಳ ಆರೋಗ್ಯ ವಿಚಾರಿಸಿದ ನಾಯಕರು

ಹುಬ್ಬಳ್ಳಿಯ ವಿವೇಕಾನಂದ ಜನರಲ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳ ಆರೋಗ್ಯವನ್ನು ಮಾಜಿ ಸಚಿವ ರಮೇಶ ಜಾರಕಿಹೊಳಿ (inamveerapura) ಗುರುವಾರ ವಿಚಾರಿಸಿದರು.
ಹುಬ್ಬಳ್ಳಿಯ ವಿವೇಕಾನಂದ ಜನರಲ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳ ಆರೋಗ್ಯವನ್ನು ಮಾಜಿ ಸಚಿವ ರಮೇಶ ಜಾರಕಿಹೊಳಿ (inamveerapura) ಗುರುವಾರ ವಿಚಾರಿಸಿದರು.
Published on
ಹುಬ್ಬಳ್ಳಿ: ತಾಲೂಕಿನ ಇನಾಂವೀರಾಪೂರ (inamveerapura) ಗ್ರಾಮದಲ್ಲಿ ನಡೆದ ದಲಿತರ ಮೇಲಿನ ಹಲ್ಲೆ ಹಾಗೂ ಹತ್ಯೆ ಪ್ರಕರಣದಲ್ಲಿ ಗಾಯಗೊಂಡವರ ಚಿಕಿತ್ಸೆಯು ಇಲ್ಲಿಯ ವಿವೇಕಾನಂದ ಜನರಲ್ ಆಸ್ಪತ್ರೆಯಲ್ಲಿ ಮುಂದುವರಿದಿದೆ.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕರಾದ ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ, ಪ್ರದೀಪ ಶೆಟ್ಟರ್, ಮಾಜಿ ಸಚಿವ ರಮೇಶ ಜಾರಕಿಹೊಳಿ, ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಹಾಗೂ ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಡಾ.ಎಲ್. ಮೂರ್ತಿ ಗಾಯಾಳುಗಳ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿ ಆರೋಗ್ಯ ವಿಚಾರಿಸಿ, ಗಾಯಾಳುಗಳಿಂದ ಮಾಹಿತಿ ಪಡೆದರು. ಅಲ್ಲದೇ ನಾವಿದ್ದೇವೆ ಎಂಬ ಭರವಸೆ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net