ರಾಜ್ಯ ಸರ್ಕಾರ ಸಕ್ಕರೆ ಕಾರ್ಖಾನೆಗಳಿಗೆ ರಹದಾರಿ ನೀಡಿ, ಭೂಮಿ, ನೀರು, ವಿದ್ಯುತ್ ಸೌಲಭ್ಯಗಳನ್ನು ನೀಡುತ್ತದೆ. ಆದರೆ, ಸರ್ಕಾರದ ಆದೇಶಗಳನ್ನು ಧಿಕ್ಕರಿಸುವ ಹಾಗೂ ಪದೇ ಪದೆ ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತರುವ ಸಕ್ಕರೆ ಕಾರ್ಖಾನೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಕಠಿಣ ಕಾನೂನನ್ನು ರಾಜ್ಯ ಸರ್ಕಾರ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.