ಜಿಲ್ಲೆಯಲ್ಲಿ ಪೆಟ್ರೋಲ್ ಅಭಾವ ಇದೆ ಎಂಬ ವದಂತಿ ಹಿನ್ನೆಲೆ ರ್ಪೂಣಿಮಾ ಅವರ ಮನೆಯಲ್ಲಿ ಪೆಟ್ರೋಲ್ ಸಂಗ್ರಹ ಮಾಡಿ ಇಡಲಾಗಿತ್ತು. ಮಾ. 30ರ ರಾತ್ರಿ ಪೆಟ್ರೋಲ್ ಕ್ಯಾನ್ಗೆ ಆಕಸ್ಮಿಕ ಬೆಂಕಿ ತಗುಲಿ ಇಡೀ ಬೆಂಕಿ ಮನೆಗೆ ಆವರಿಸಿತ್ತು. ಈ ವೇಳೆ ಮನೆಯಲ್ಲಿದ್ದ ರ್ಪೂಣಿಮಾ ಬೆಂಕಿಗೆ ಸಿಲುಕಿ ತೀವ್ರ ಗಾಯಗೊಂಡಿದ್ದರು. ಹುಬ್ಬಳ್ಳಿಯ ಕೆಎಂಸಿಆರ್ಐ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಈ ಕುರಿತು ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.