ಧಾರವಾಡ: ಜಿಲ್ಲೆಯ ರೈತರು ಈ ಬಾರಿ ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಜಿಲ್ಲೆಯ ಸುಮಾರು 2.90 ಲ ಹೆಕ್ಟೇರ್ ಕೃಷಿಯೋಗ್ಯ ಭೂಮಿಯಲ್ಲಿ ಶೇ. 96 (2.80 ಲ ಹೆಕ್ಟೇರ್) ಕ್ಕೂ ಹೆಚ್ಚು ಪ್ರದೇಶದಲ್ಲಿ ಬಿತ್ತನೆ ನಡೆದಿದೆ. 45 ಸಾವಿರ ಹೆಕ್ಟೇರ್ಗೂ ಹೆಚ್ಚು ಪ್ರದೇಶದಲ್ಲಿ ಹೆಸರು, ಉದ್ದು, 40 ಸಾವಿರ ಹೆಕ್ಟೇರ್ಗೂ ಹೆಚ್ಚು ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆಯಲಾಗಿದೆ. ಸೋಯಾಬೀನ್, ಹತ್ತಿ, ಕಡಲೆಕಾಯಿ, ಕಬ್ಬು, ಈರುಳ್ಳಿ ಸೇರಿ ವಿವಿಧ ತೋಟಗಾರಿಕಾ ಬೆಳೆಗಳೂ ಮಳೆ ಸಂಕಷ್ಟಕ್ಕೆ ಸಿಲುಕಿವೆ ಎಂದು ಸಂಪುಟ ದರ್ಜೆ ಸಚಿವ ಸಂತೋಷ ಲಾಡ್ ಹೇಳಿದರು.