ಇನ್‌ಸ್ಪೆಕ್ಟರ್ ಮೊಹಮ್ಮದ್ ರಫಿಕ್ ಅಮಾನತು

ಮೊಹಮ್ಮದ ರಫೀಕ್
ಮೊಹಮ್ಮದ ರಫೀಕ್
Published on

ಧಾರವಾಡ: ವಿದ್ಯಾರ್ಥಿ ಆದಿತ್ಯ ಮ್ಯಾಗೇರಿ ಆತ್ಯಹತ್ಯೆ ಪ್ರಕರಣಕ್ಕೆ ಸಂಬಧಿಸಿದಂತೆ ನಗರದ ವಿದ್ಯಾಗಿರಿ ಠಾಣೆಯ ಇನ್‌ಸ್ಪೆಕ್ಟರ್ ಮೊಹಮ್ಮದ್ ರಫಿಕ್ ತಹಸೀಲ್ದಾರ್ ಅವರನ್ನು ಅಮಾನತುಗೊಳಿಸಲಾಗಿದೆ. ಪ್ರಕರಣದಲ್ಲಿ ಈವರೆಗೆ ಅಮಾನತಾದವರ ಸಂಖ್ಯೆ ನಾಲಕ್ಕೆ ಏರಿಕೆಯಾಗಿದೆ.
ಪ್ರಕರಣಕ್ಕೆ ಸಂಬಂಧಿದಂತೆ ವಿದ್ಯಾಗಿರಿ ಠಾಣೆಯ ಇಬ್ಬರು ಹೆಡ್ ಕಾನ್‌ಸ್ಟೆಬಲ್‌ಗಳು ಮತ್ತು ಒರ್ವ ಕಾನ್‌ಸ್ಟೆಬಲ್ ಸಹಿತ ಮೂವರನ್ನು ಬುಧವಾರ ಅಮಾನತುಗೊಳಿಸಲಾಗಿತ್ತು. ಗಾಂಜಾ ಪ್ರಕರಣದಲ್ಲಿ ಆದಿತ್ಯನ ವಿಚಾರಣೆ ನಡೆಸಿ ಪೊಲೀಸರು 2 ಸಾವಿರ ಹಣ ಕೊಡುವಂತೆ ಪೊಲೀಸರು ಆತನಿಗೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಲಾಗಿದೆ. ವಿದ್ಯಾಗಿರಿ ಠಾಣೆಯ ಇನ್‌ಸ್ಪೆಕ್ಟರ್ ರಫಿಕ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.


ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net