LED ಎಲ್​ಇಡಿ ಬೀದಿದೀಪಗಳ ಅಳವಡಿಕೆ ಶೀಘ್ರ

LED ಮಹಾನಗರ ಪಾಲಿಕೆ ಹುಬ್ಬಳ್ಳಿ ಮುಖ್ಯ ಕಚೇರಿಯಲ್ಲಿ ಆಯೋಜಿಸಿದ್ದ ಫೋನ್ ಇನ್ ಕಾರ್ಯಕ್ರಮದಲ್ಲಿ ಮೇಯರ್ ಜ್ಯೋತಿ ಪಾಟೀಲ ಮಾತನಾಡಿದರು. ಪಾಲಿಕೆ ಉಪ ಆಯುಕ್ತ ವಿಜಯಕುಮಾರ ಆರ್. ಇದ್ದರು.
LED ಮಹಾನಗರ ಪಾಲಿಕೆ ಹುಬ್ಬಳ್ಳಿ ಮುಖ್ಯ ಕಚೇರಿಯಲ್ಲಿ ಆಯೋಜಿಸಿದ್ದ ಫೋನ್ ಇನ್ ಕಾರ್ಯಕ್ರಮದಲ್ಲಿ ಮೇಯರ್ ಜ್ಯೋತಿ ಪಾಟೀಲ ಮಾತನಾಡಿದರು. ಪಾಲಿಕೆ ಉಪ ಆಯುಕ್ತ ವಿಜಯಕುಮಾರ ಆರ್. ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ‘ಮೇಯರ್ ಜೊತೆ ಮಾತುಕತೆ’ ಫೋನ್ ಇನ್ ಕಾರ್ಯಕ್ರಮ
  • ಸಂಪೂರ್ಣ ನಿರ್ವಹಣೆ ಗುತ್ತಿಗೆದಾರರದು.
  • ವಾರ್ಡ್​ಗಳಲ್ಲಿ ಭಾನುವಾರದಂದು ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗುವುದು.
ನಗರದಲ್ಲಿ ಬುಧವಾರ ಆಯೋಜಿಸಿದ್ದ ‘ಮೇಯರ್ ಜೊತೆ ಮಾತುಕತೆ’ ಫೋನ್ ಇನ್ ಕಾರ್ಯಕ್ರಮದ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಅವರು ಈ ವಿಷಯ ತಿಳಿಸಿದರು.
ಮುಖ್ಯ ರಸ್ತೆ, ವಾಣಿಜ್ಯ ಮಾರುಕಟ್ಟೆ, ಜನವಸತಿ ಬಡಾವಣೆಗಳಲ್ಲಿ ವಿವಿಧ ವೋಲ್ಟ್​ಗಳ ಎಲ್​ಇಡಿ ದೀಪಗಳನ್ನು ಅಳವಡಿಸಲಾಗಿದೆ. ಪಿಪಿಪಿ ಮಾದರಿಯಲ್ಲಿ ಇವುಗಳನ್ನು ಅಳವಡಿಸಲಾಗಿದ್ದು, ಸಂಪೂರ್ಣ ನಿರ್ವಹಣೆ ಗುತ್ತಿಗೆದಾರರದು ಎಂದರು.
ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವ ಉದ್ದೇಶದಿಂದ ಸ್ವಚ್ಛ ಸಂಡೆ ಎಂಬ ಕಾರ್ಯಕ್ರಮ ಜಾರಿಗೊಳಿಸಲು ತೀರ್ವನಿಸಲಾಗಿದೆ. ಪ್ರತಿ ವಲಯ ವ್ಯಾಪ್ತಿಯ ವಾರ್ಡ್​ಗಳಲ್ಲಿ ಭಾನುವಾರದಂದು ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗುವುದು.
ಈ ರೀತಿ ಮಾಡಿದರೆ, ಒಂದೂವರೆಯಿಂದ ಎರಡು ತಿಂಗಳ ಅವಧಿಯಲ್ಲಿ ವಲಯವಾರು ಎಲ್ಲ ವಾರ್ಡ್​ಗಳು ಸ್ವಚ್ಛಗೊಳ್ಳುತ್ತವೆ ಎಂದು ಹೇಳಿದರು.
ಇತ್ತೀಚೆಗೆ ಪ್ರವಾಸ ಕೈಗೊಂಡಿದ್ದ ಇಂದೋರನಲ್ಲಿ ತ್ಯಾಜ್ಯವನ್ನು ಆರು ವಿಧವಾಗಿ ಸಂಗ್ರಹಿಸಲಾಗುತ್ತದೆ. ಒಣಕಸ, ಹಸಿ ಕಸ, ಪ್ಲಾಸ್ಟಿಕ್ ತ್ಯಾಜ್ಯ, ಇಲೆಕ್ಟ್ರಿಕ್ ತ್ಯಾಜ್ಯ, ನೀರಿನ ಬಾಟಲಿಗಳನ್ನು ಪ್ರತ್ಯೇಕವಾಗಿ ಸಂಗ್ರಹಿಸಲಾಗುತ್ತದೆ. ಆದರೆ, ಇಲ್ಲಿ ಒಣ ಹಾಗೂ ಹಸಿ ಕಸವನ್ನು ಮಾತ್ರ ಪ್ರತ್ಯೇಕಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ ಎಂದರು.
ಮನೆಯಿಂದ ಕಸ ಸಂಗ್ರಹಿಸಲು ಸಾಕಷ್ಟು ಟಿಪ್ಪರ್​ಗಳನ್ನು ಖರೀದಿಸಲಾಗಿದೆ. ಆದರೂ, ಕೆಲವೆಡೆ ಟಿಪ್ಪರ್​ಗಳು 7-8 ದಿನಗಳಿಗೊಮ್ಮೆ ಕಸ ಸಂಗ್ರಹಿಸಲಾಗುತ್ತದೆ ಎಂಬ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಭೆ ಕರೆದು, ರ್ಚಚಿಸಲಾಗುವುದು ಎಂದು ಹೇಳಿದರು.
ಇಂದೋರನಲ್ಲಿ ಮಹಾಪೌರರ ಆಡಳಿತ ಅವಧಿ 5 ವರ್ಷಗಳದ್ದಾಗಿದೆ. ಅಲ್ಲಿ ಮೂವರು ಐಎಎಸ್ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.
ಫೋನ್ ಇನ್ ಕಾರ್ಯಕ್ರಮದಲ್ಲಿ 22 ಕರೆಗಳು ಬಂದಿದ್ದು, 29 ದೂರುಗಳು ದಾಖಲಾಗಿವೆ. ಇದರಲ್ಲಿ ಗಟಾರ ಸ್ವಚ್ಛತೆ, ಬೀದಿ ದೀಪದ ಸಮಸ್ಯೆ, ಉದ್ಯಾನದ ಸ್ವಚ್ಛತೆಯ ಕರೆಗಳು ಹೆಚ್ಚಿನದ್ದಾಗಿವೆ ಎಂದು ಹೇಳಿದರು.
ಪಾಲಿಕೆ ಉಪ ಆಯುಕ್ತ ವಿಜಯಕುಮಾರ ಆರ್., ವಲಯ ಸಹಾಯಕ ಆಯುಕ್ತರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net