ಅಂತರ ಶಾಲಾ ಬಾಹ್ಯಾಕಾಶ ಸ್ಪರ್ಧೆ 23ಕ್ಕೆ space

space ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಸೆಂಟ್ರಲ್ ಅಧ್ಯಕ್ಷೆ ಡಾ. ನಾಗರೇಖಾ ಹೆಬಸೂರ.
space ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಸೆಂಟ್ರಲ್ ಅಧ್ಯಕ್ಷೆ ಡಾ. ನಾಗರೇಖಾ ಹೆಬಸೂರ.
Published on

ಪ್ರಮುಖ ಮುಖ್ಯಾಂಶಗಳು

  • ಇಂಗ್ಲಿಷ್ ಮಾಧ್ಯಮದ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ
  • ಹುಬ್ಬಳ್ಳಿಯ 16 ಶಾಲೆಗಳ ಸುಮಾರು 500 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದಾರೆ.
  • ಹುಬ್ಬಳ್ಳಿಯ ಶಾಲೆಗಳ ವಿದ್ಯಾರ್ಥಿಗಳಿಗೆ ಮಾತ್ರ ಈ ಸ್ಪರ್ಧೆ
ಗುರುವಾರದಂದು ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಸೆಂಟ್ರಲ್ ಅಧ್ಯಕ್ಷೆ ಡಾ. ನಾಗರೇಖಾ ಹೆಬಸೂರ, ಹುಬ್ಬಳ್ಳಿಯ ಶಾಲೆಗಳ ವಿದ್ಯಾರ್ಥಿಗಳಿಗೆ ಮಾತ್ರ ಈ ಸ್ಪರ್ಧೆ ಆಯೋಜಿಸಲಾಗುತ್ತಿದೆ ಎಂದರು.
ಕಳೆದ ವಾರ ವಿವಿಧ ಶಾಲೆಗಳಲ್ಲಿ ಆಂತರಿಕ ಮಟ್ಟದಲ್ಲಿ ಸ್ಪರ್ಧೆ ಆಯೋಜಿಸಿದ್ದು, ಅಂತಿಮ ಸುತ್ತಿಗೆ ಆಯ್ಕೆಯಾದವರು ಆ. 23ರ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದಾರೆ.
ಒಂದು ವರ್ಷ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಹಾಗೂ ಮತ್ತೊಂದು ವರ್ಷ ಇಂಗ್ಲಿಷ್ ಮಾಧ್ಯಮದ ವಿದ್ಯಾರ್ಥಿಗಳಿಗೆ ಸ್ಪರ್ಧೆ ಏರ್ಪಡಿಸಲಾಗುತ್ತಿದೆ. ಈ ಬಾರಿ ಇಂಗ್ಲಿಷ್ ಮಾಧ್ಯಮದ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ ಎಂದು ತಿಳಿಸಿದರು.
ಹುಬ್ಬಳ್ಳಿಯ 16 ಶಾಲೆಗಳ ಸುಮಾರು 500 ವಿದ್ಯಾರ್ಥಿಗಳು ತಮ್ಮ ಸೃಜನಶೀಲತೆ, ವೈಜ್ಞಾನಿಕ ಕುತೂಹಲ ಹಾಗೂ ಭಾರತದ ಬಾಹ್ಯಾಕಾಶ ಭವಿಷ್ಯದ ಕನಸುಗಳನ್ನು ಅನಾವರಣಗೊಳಿಸಲಿದ್ದಾರೆ.
ವಯೋಮಾನದ ಆಧಾರದ ಮೇಲೆ ರೂಪಿಸಲಾದ ವಿವಿಧ ಸ್ಪರ್ಧೆಗಳ ಮೂಲಕ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಕುತೂಹಲ ಬೆಳೆಸುವುದರ ಜತೆಗೆ ಬಾಹ್ಯಾಕಾಶ ವಿಜ್ಞಾನ, ತಂತ್ರಜ್ಞಾನ ಹಾಗೂ ಉದಯೋನ್ಮುಖ ಕ್ಷೇತ್ರಗಳಲ್ಲಿ ಭವಿಷ್ಯದ ವೃತ್ತಿ ಅವಕಾಶಗಳ ಕುರಿತು ಆರಂಭಿಕ ಅರಿವು ಮೂಡಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ವಿವರಿಸಿದರು.
ನಯನ ಗೋಟಡಬಜೆ, ಅಶ್ವಿನಿ ಅಣ್ವೇಕರ, ಶ್ರೀದೇವಿ ರೂಗಿ, ಶಿಲ್ಪಾ ಕೋಶಾರಿ, ಡಾ. ವಿದ್ಯಾ ಹೊನ್ನವಾಡ ಸುದ್ದಿಗೋಷ್ಠಿಯಲ್ಲಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net