72,000 ಹುದ್ದೆಗಳಿಗೆ ಕೂಡಲೇ ಅಧಿಸೂಚನೆ ಹೊರಡಿಸಿ

ಎಐಡಿವೈಒ,ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ಡಿಸಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಯಿತು.
ಎಐಡಿವೈಒ,ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ಡಿಸಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಯಿತು.
Published on
ಧಾರವಾಡ: ರಾಜ್ಯ ಸರ್ಕಾರ ಘೋಷಿಸಿದಂತೆ 72,000 ಹುದ್ದೆಗಳಿಗೆ ಕೂಡಲೇ ಅಧಿಸೂಚನೆ ಹೊರಡಿಸಿ, ಆರು ತಿಂಗಳ ಒಳಗೆ ನೇಮಕಾತಿ ಆದೇಶ ನೀಡಬೇಕು ಹಾಗೂ ಕೆಪಿಎಸ್​ಸಿ ಭ್ರಷ್ಟಾಚಾರ ತಡೆಗಟ್ಟಿ ಪಾರದರ್ಶಕ ನೇಮಕಾತಿ ಮಾಡಬೇಕು ಎಂದು ಒತ್ತಾಯಿಸಿ ಆಲ್​ ಇಂಡಿಯಾ ಡೆಮಾಕ್ರೆಟಿಕ್​ ಯೂತ್​ ಆರ್ಗನೈಜೇಷನ್​ (ಎಐಡಿವೈಒ), ಉದ್ಯೋಗಾಕಾಂಗಳ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಯಿತು.
ಹೋರಾಟದ ಲವಾಗಿ ರಾಜ್ಯ ಸರ್ಕಾರವು ವಿವಿಧ ಇಲಾಖೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿರುವುನ್ನು ಹಾಗೂ ನೇರ ನೇಮಕಾತಿಗಳಲ್ಲಿ 2027ರವರೆಗೆ ಐದು ವರ್ಷ ವಯೋಮಿತಿ ಸಡಿಲಿಕೆ ಮಾಡಿರುವ ಆದೇಶವನ್ನು ಸ್ವಾಗತಿಸುತ್ತೇವೆ. ಇದರ ಜತೆಗೆ ಆರು ತಿಂಗಳೊಳಗೆ 72,000 ಹುದ್ದೆಗಳನ್ನು ಭತಿರ್ ಮಾಡುವುದಾಗಿ ರಾಜ್ಯ ಸರ್ಕಾರವು ಕಳೆದ ಜೂನ್​ ನಲ್ಲಿ ಘೋಷಿಸಿತ್ತು. ಆದರೆ, ಈವರೆಗೆ ಹೊರಡಿಸಿರುವ ಎಲ್ಲ ಅಧಿಸೂಚನೆಗಳನ್ನು ಸೇರಿದರೂ 25,000 ಹುದ್ದೆಗಳನ್ನು ದಾಟುತ್ತಿಲ್ಲ. ಆದ್ದರಿಂದ ಕೂಡಲೇ ಉಳಿದ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಬೇಕು. ಹಾಗೆಯೇ ರಾಜ್ಯದಲ್ಲಿ ಕಾಲಿ ಇರುವ ಎಲ್ಲ 2.84 ಲ ಹುದ್ದೆಗಳಿಗೂ ನೇಮಕಾತಿ ಮಾಡಬೇಕು ಎಂದು ಒತ್ತಾಯಿಸಿದರು.
ವಿವಿಧ ಹುದ್ದೆಗಳ ನೇಮಕಾತಿ ವೇಳೆ ಐಟಿಐ ಅನ್ನು ಪಿಯುಸಿಗೆ ತತ್ಸಮಾನವಾಗಿ ಪರಿಗಣಿಸಬೇಕು. ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ವಿಷಯವಾರು ಹಾಗೂ ವಿಶೇಷ ಶಿಕರನ್ನು ನೇಮಕ ಮಾಡಬೇಕು. ಭೀಕರ ಬರಗಾಲದ ಹಿನ್ನೆಲೆಯಲ್ಲಿ ವಿಬಿಜಿ ರಾಮ್​ ಜಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿ ಮಾಡಿ, ಮಾನವ ದಿನಗಳನ್ನು 200 ದಿನಕ್ಕೆ ಏರಿಕೆ ಮಾಡಬೇಕು. ರಾಜ್ಯದ ಸಾರ್ವಜನಿಕ ಗ್ರಂಥಾಲಯಗಳಲ್ಲಿ ಮೂಲ ಸೌಕರ್ಯ ಕಲ್ಪಿಸಿ, ರಜೆ ದಿನಗಳಲ್ಲಿ ಸಹ ಗ್ರಂಥಾಲಯ ತೆರೆಯಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಬಳಿಕ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ರವಾನಿಸಲಾಯಿತು.
ಎಐಡಿವೈಒ ಜಿಲ್ಲಾಧ್ಯ ಭವಾನಿ ಶಂಕರ್​ ಗೌಡ, ಯಲ್ಲಪ್ಪ ದೊರೆ, ಮಲ್ಲೇಶ ಚೌವ್ಹಾಣ, ಹನುಮಗೌಡ ಹಾಗೂ ಉದ್ಯೋಗಾಂಗಳು ಇದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net