jail ಸಾವಿಗೆ ಕಾರಣವಾದವಗೆ 6 ತಿಂಗಳು ಜೈಲು

jail ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ
jail ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ
Published on
ಹುಬ್ಬಳ್ಳಿ: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಸಾವಿಗೆ ಕಾರಣವಾಗಿದ್ದವನಿಗೆ 6 ತಿಂಗಳು ಜೈಲು jail ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಿ, ಇಲ್ಲಿಯ ಹಿರಿಯ ದಿವಾಣಿ ಹಾಗೂ ಜೆಎಂಎಫ್‌ಸಿ ಪ್ರಥಮ ದರ್ಜೆ ನ್ಯಾಯಾಲಯದ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ರಾಜೇಶ ಮುನಿರತ್ನಂ ಶಿಕ್ಷೆಗೆ ಒಳಗಾದ ವ್ಯಕ್ತಿ. 2022ರಲ್ಲಿ ಇಲ್ಲಿಯ ಕೇಶ್ವಾಪೂರ ಸರ್ವೋದಯ ವೃತ್ತದಲ್ಲಿ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಬಂದ ರಾಜೇಶ, ದ್ವಿಚಕ್ರ ವಾಹನದ ಮೇಲೆ ಹೊರಟ್ಟಿದ್ದ ಪಾಯಲ್ ಜೈನ್ ಎಂಬುವವರಿಗೆ ಡಿಕ್ಕಿ ಹೊಡೆಸಿದ್ದ. ಇದರಿಂದ ಗಾಯಗೊಂಡು ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದರು. ಈ ವಿಷಯ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಎನ್.ಸಿ. ಕಾಡದೇವರ ಅವರು ರಾಜೇಶ ವಿರುದ್ಧ ದೋಷಾರೋಪಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಯಮನಪ್ಪ ಕರೇಹನುಮಂತಪ್ಪ ಅವರು ತೀರ್ಪು ನೀಡಿದ್ದು, ಸರ್ಕಾರಿ ಅಭಿಯೋಜಕ ಶಿದ್ಲಿಂಗಪ್ಪ ನಾಗಠಾಣ ವಾದ ಮಂಡಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net