ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ, ಧಾರವಾಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪಕ್ಷ ಸಂಘಟನೆ ದೃಷ್ಟಿಯಿಂದ ಏಪ್ರಿಲ್- ಮೇ ನಲ್ಲಿ ಸಮಾವೇಶ ಏರ್ಪಡಿಸಲು ನಿರ್ಧರಿಸಲಾಗಿದೆ. ಪ್ರತಿ ಜಿಲ್ಲೆಯಲ್ಲಿ ಇಂತಹ ಕಾರ್ಯಕ್ರಮ ಮಾಡಲಾಗುತ್ತಿದ್ದು, ಜೆಡಿಎಸ್ ವರಿಷ್ಠರು ಇದರಲ್ಲಿ ಪಾಲ್ಗೊಳ್ಳುವರು. ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಅವರು ಪಕ್ಷ ಸದೃಢಗೊಳಿಸುವ ದಿಸೆಯಲ್ಲಿ ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದಾರೆ ಎಂದರು.