job fair ಪಾಟೀಲ ಕಾಲೇಜಿನಲ್ಲಿ ಉದ್ಯೋಗ ಮೇಳ

job fair ಹುಬ್ಬಳ್ಳಿಯ ವೇಮನ ವಿದ್ಯಾವರ್ಧಕ ಸಂಘದ ಕೆ.ಎಚ್​. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಭಾನುವಾರ ಏರ್ಪಡಿಸಿದ್ದ ಉದ್ಯೋಗ ಮೇಳ ಉದ್ಘಾಟನೆಯಲ್ಲಿ ಉಪಾಧ್ಯಕ್ಷ ಆರ್​.ಟಿ. ಜಂಗಲ, ಆರ್​.ಕೆ. ಪಾಟೀಲ, ಜಿ.ಬಿ. ಗೌಡಪ್ಪಗೋಳ, ಎಸ್​.ಬಿ. ಸಣಗೌಡರ ಇತರರು ಇದ್ದರು.

Published on
ವಿವಿಧ ಕಡೆಯಿಂದ ಬಂದಿದ್ದ 20ಕ್ಕೂ ಹೆಚ್ಚು ಕಂಪನಿಗಳ ಪ್ರತಿನಿಧಿಗಳು ಅಭ್ಯರ್ಥಿಗಳ ಸಂದರ್ಶನ ನಡೆಸಿದರು. 200ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಮೇಳದ ಪ್ರಯೋಜನ ಪಡೆದರು.
ವೇಮನ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಆರ್​.ಟಿ. ಜಂಗಲ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಮೇಳ ಬಹಳ ಅನುಕೂಲವಾಗಿದೆ ಎಂದರು.
ಅತಿಥಿಯಾಗಿದ್ದ ಸಂಘದ ಗೌರವ ಕಾರ್ಯದರ್ಶಿ`ಆರ್​.ಕೆ. ಪಾಟೀಲ ಮಾತನಾಡಿ, ಉದ್ಯೋಗದಾತರು ವಿದ್ಯಾರ್ಥಿಗಳಿಗೆ ಸೂಕ್ತ ತರಬೇತಿ ನೀಡಿದಲ್ಲಿ ಅವರು ಉತ್ತಮ ಉದ್ಯಮಶೀಲರಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.
ಅಧ್ಯಕ್ಷತೆ ವಹಿಸಿದ್ದ ನಿವೃತ್ತ ವಾಣಿಜ್ಯ ತೆರಿಗೆ ಅಧಿಕಾರಿ ಜಿ.ಬಿ. ಗೌಡಪ್ಪಗೋಳ, ಮಹಾವಿದ್ಯಾಲಯದ ಸ್ಥಾನಿಕ ಆಡಳಿತ ಮಂಡಳಿಯು ಗ್ರಾಮೀಣ ವಿದ್ಯಾರ್ಥಿಗಳಿಗೆ ಹಲವು ಯೋಜನೆಗಳನ್ನು ರೂಪಿಸಿದ್ದು, ಅವುಗಳನ್ನು ಬಳಸಿಕೊಂಡು ಉದ್ಯೋಗ ಗಿಟ್ಟಿಸಿಕೊಳ್ಳಬೇಕೆಂದು ಹೇಳಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net