ಧಾರವಾಡ: ಕರ್ನಾಟಕ ಕೌಶಲ್ಯ ಅಭಿವದ್ಧಿ ನಿಗಮ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ. ಮೇಳದ ಯಶಸ್ಸಿಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಉದ್ಯೋಗ ಮೇಳ ಆಯೋಜನೆ ಕುರಿತ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯ ವಿವಿಧ ಪದವಿ, ಐಟಿಐ ವಿದ್ಯಾಥಿರ್ಗಳು ಪಾಲ್ಗೊಳ್ಳುವಂತೆ ಮಾಹಿತಿ ನೀಡಬೇಕು. ಅರ್ಹರಿಗೆ ಉದ್ಯೋಗ ದೊರೆಯಬೇಕು. ಮೇಳದಲ್ಲಿ ಕುಡಿಯುವ ನೀರು, ಶೌಚಗೃಹ, ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು ಎಂದರು.
ಜಿ.ಪಂ. ಸಿಇಒ ಭುವನೇಶ ಪಾಟೀಲ ಮಾತನಾಡಿ, ಉದ್ಯೊಗ ಮೇಳದ ಯಶಸ್ವಿ ಆಯೋಜನೆಗೆ ಸಮಿತಿಗಳನ್ನು ರಚಿಸಲಾಗಿದೆ. ಪ್ರತಿದಿನ ಪ್ರತ್ಯೇಕವಾಗಿ ವಿವಿಧ ಶಿಣ ಸಂಸ್ಥೆಗಳೊಂದಿಗೆ ಹಾಗೂ ಕೈಗಾರಿಕೋದ್ಯಮಿಗಳೊಂದಿಗೆ ಸಭೆ ಜರುಗಿಸಿ, ಅಗತ್ಯ ಮಾಹಿತಿ ನೀಡಲಾಗುತ್ತಿದೆ ಎಂದರು.
ಜಿ.ಪಂ. ಮಲ್ಲಿಕಾರ್ಜುನ ತೊದಲಬಾಗಿ, ಮುಖ್ಯ ಲೆಕ್ಕಾಧಿಕಾರಿ ಲಲಿತಾ ಲಮಾಣಿ, ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ ಇದ್ದರು.
ತಾ.ಪಂ. ಇಒಗಳು, ಕೈಗಾರಿಕೆ, ಕಾಮಿರ್ಕ, ಕೌಶಲ್ಯಾಭಿವೃದ್ಧಿ ಇಲಾಖೆಗಳ ಅಧಿಕಾರಿಗಳು, ಐಟಿಐ, ಇಂಜಿನಿಯರಿಂಗ್ ಕಾಲೇಜುಗಳ ಪ್ರತಿನಿಧಿಗಳು, ತಾರಿಹಾಳ ಮತ್ತು ಬೇಲೂರು ಕೆಗಾರಿಕಾ ಪ್ರದೇಶದ ಕೆಗಾರಿಕೋದ್ಯಮಿಗಳ ಸಂದ ಪ್ರತಿನಿಧಿಗಳು ಭಾಗವಹಿಸಿದ್ದರು.