jss election ಪ್ರಜಾಪ್ರಭುತ್ವದ ಮೌಲ್ಯ ಎತ್ತಿ ಹಿಡಿಯುವ ಚುನಾವಣೆ
jss election ಹುಬ್ಬಳ್ಳಿಯ ಉಣಕಲ್ಲ ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ಸೆಂಟ್ರಲ್ ಸ್ಕೂಲ್ನಲ್ಲಿ ಶಾಲಾ ಸಂಸತ್ ಸದಸ್ಯರ ಪ್ರಮಾಣ ವಚನ ಸಮಾರಂಭದಲ್ಲಿ ಅರಿಹಂತ ಪ್ರಸಾದ್, ಮಹಾವೀರ ಉಪಾಧ್ಯೆ, ಪ್ರೇರಣಾ ಪಾತ್ರ, ಇತರರು ಪಾಲ್ಗೊಂಡಿದ್ದರು.
ಹುಬ್ಬಳ್ಳಿ: jss election ಇಲ್ಲಿಯ ಉಣಕಲ್ಲನಲ್ಲಿರುವ ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ಸೆಂಟ್ರಲ್ ಸ್ಕೂಲ್ನಲ್ಲಿ ಶನಿವಾರ ಶಾಲಾ ಸಂಸತ್ ರಚನೆಗಾಗಿ ಚುನಾವಣೆ ಪ್ರಕ್ರಿಯೆ ನಡೆಸಲಾಯಿತು.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗುರುತಿನ ಬಿಲ್ಲೆಗಳನ್ನು ವಿತರಿಸಿ ಪ್ರಮಾಣವಚನ ಬೋಧಿಸಲಾಯಿತು.
ವಿದ್ಯಾರ್ಥಿಗಳಲ್ಲಿ ನಾಯಕತ್ವ, ಜವಾಬ್ದಾರಿತನ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯುವುದು ಹಾಗೂ ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಅತಿಥಿಗಳಾಗಿದ್ದ ಜನತಾ ಶಿಕ್ಷಣ ಸಮಿತಿ ಆಡಳಿತಾಧಿಕಾರಿ ಅರಿಹಂತ ಪ್ರಸಾದ್ ಹಾಗೂ ಜೆಎಸ್ಎಸ್ ಐಟಿಐ ಕಾಲೇಜಿನ ಪ್ರಾಂಶುಪಾಲ ಮಹಾವೀರ ಉಪಾಧ್ಯೆ ಅವರು ಪ್ರಮಾಣ ವಚನ ಸ್ವೀಕಾರ ಸಮಾರಂಭ ಉದ್ಘಾಟಿಸಿದರು.
ವಿದ್ಯಾರ್ಥಿ ಸಂಸತ್ ನ ಅವಶ್ಯಕತೆ ಹಾಗೂ ಅದರಿಂದ ಮಕ್ಕಳಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ಪ್ರಜಾಪ್ರಭುತ್ವದ ಮಹತ್ವ ತಿಳಿದುಕೊಳ್ಳುವ ಅವಕಾಶ ಸಿಗಲಿದೆ ಎಂದು ಅತಿಥಿಗಳು ಹೇಳಿದರು.
ಶಾಲಾ ಸಂಸತ್ತಿನ ಮದರ್ ಆಫ್ ಪಾಲಿರ್ಮೆಂಟ್ ಆಗಿ ಕ್ರಿಸ್ಟಿನಾ ಆಯ್ಕೆಯಾದರು. ಅವರು ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು.