ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಎನ್.ಎಚ್. ಕೋನರಡ್ಡಿ, ಕೃಷಿಕ ಸಮಾಜದ ಕಟ್ಟಡಕ್ಕೆ ಒಂದು ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಸುಸಜ್ಜಿತ ಕಟ್ಟಡ ನಿರ್ಮಿಸಿ ರೈತರಿಗೆ ಅನುಕೂಲ ಮಾಡಿಕೊಡಲಾಗುವುದು. ಈಗಾಗಲೇ ನವಲಗುಂದ ವಿಧಾನಸಭಾ ಕ್ಷೇತ್ರದ ಹುಬ್ಬಳ್ಳಿ ಗ್ರಾಮೀಣ, ನವಲಗುಂದ ತಾಲೂಕು ಹಾಗೂ ಅಣ್ಣಿಗೇರಿ ತಾಲೂಕಿನಲ್ಲಿ ಕೃಷಿಕ ಸಮಾಜದಿಂದ ತಲಾ 10 ಲಕ್ಷ ರೂ. ನಿವೇಶನ ಖರೀದಿಸಲು ಅಂದಿನ ರಾಜ್ಯ ಕೃಷಿಕ ಸಮಾಜದ ಅಧ್ಯಕ್ಷ ಬಿ.ಕೆ. ಮಂಜುನಾಥಗೌಡ ಅವರು ಅನುದಾನ ಬಿಡುಗಡೆ ಮಾಡಿದ್ದು, ಈಗಾಗಲೇ ನಿವೇಶನ ಖರೀದಿಸಲಾಗಿದೆ ಎಂದರು.