ಬಸ್-ಟಿಪ್ಪರ್ ಮಧ್ಯೆ ಅಪಘಾತ ವಿದ್ಯಾರ್ಥಿ ಸಾವು student death

ಕುಂದಗೋಳದಲ್ಲಿ ಬಸ್ ಮತ್ತು ಟಿಪ್ಪರ್ ಲಾರಿ ಮಧ್ಯೆ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟ ಐಟಿಐ ವಿದ್ಯಾರ್ಥಿ ಫಕೀರೇಶ ಚನ್ನಯ್ಯ ಮುತ್ತಳ್ಳಿಮಠ.
ಕುಂದಗೋಳದಲ್ಲಿ ಬಸ್ ಮತ್ತು ಟಿಪ್ಪರ್ ಲಾರಿ ಮಧ್ಯೆ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟ ಐಟಿಐ ವಿದ್ಯಾರ್ಥಿ ಫಕೀರೇಶ ಚನ್ನಯ್ಯ ಮುತ್ತಳ್ಳಿಮಠ.
Published on
ಕುಂದಗೋಳ: ಪಟ್ಟಣದ ಹುಬ್ಬಳ್ಳಿ-ಲಕ್ಷ್ಮೇಶ್ವರ ಮುಖ್ಯ ರಸ್ತೆಯ ಕೊಪ್ಪದ ಕೆರೆ ಬಳಿ ಬುಧವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐಟಿಐ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ತಾಲೂಕಿನ ಶಿರೂರ ಗ್ರಾಮದ ನಿವಾಸಿ ಫಕೀರೇಶ ಚನ್ನಯ್ಯ ಮುತ್ತಳ್ಳಿಮಠ (18) ಮೃತಪಟ್ಟ ದುರ್ದೈವಿ. 
ಘಟನೆ ಹಿನ್ನೆಲೆ: ಬುಧವಾರ ಸಂಜೆ 5 ಗಂಟೆ ವೇಳೆಗೆ ಲಕ್ಷ್ಮೇಶ್ವರ ಡಿಪೋಗೆ ಸೇರಿದ ಸಾರಿಗೆ ಬಸ್ ಮತ್ತು ಎಂ-ಸ್ಯಾಂಡ್ ತುಂಬಿದ್ದ ಟಿಪ್ಪರ್ ಲಾರಿ ಮಧ್ಯೆ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಬಸ್‌ನ ಕಿಟಕಿ ಬಳಿ ಕುಳಿತಿದ್ದ ವಿದ್ಯಾರ್ಥಿ ಫಕೀರೇಶನ ತಲೆಗೆ ಗಂಭೀರ ಪೆಟ್ಟಾಗಿ, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಕುಂದಗೋಳ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳ ಪರಿಶೀಲನೆ ಬಳಿಕ ಸುಗಮ ಸಂಚಾರಕ್ಕೆ ಅನುವು ಮಾಡಿದರು. ಅಪಘಾತಕ್ಕೆ ಕಾರಣರಾದವರ ವಿರುದ್ಧ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಘಟನೆ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net