labour protest ಕನಿಷ್ಠ ವೇತನಕ್ಕಾಗಿ ಕಾರ್ಮಿಕರ ಪ್ರತಿಭಟನೆ

labour protest ಹುಬ್ಬಳ್ಳಿ ಎಪಿಎಂಸಿ ಹಮಾಲಿ ಕಾರ್ಮಿಕರ ಒಕ್ಕೂಟದಿಂದ ಬುಧವಾರ ಕನಿಷ್ಠ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಮಹೇಶ ಪತ್ತಾರ, ಗುರುಸಿದ್ದಪ್ಪ ಅಂಬಿಗೇರ, ಬಸವಣ್ಣೆಪ್ಪ ನೀರಲಗಿ, ಬಿ.ಐ. ಈಳಿಗೇರ, ಇತರರು ಇದ್ದರು.
labour protest ಹುಬ್ಬಳ್ಳಿ ಎಪಿಎಂಸಿ ಹಮಾಲಿ ಕಾರ್ಮಿಕರ ಒಕ್ಕೂಟದಿಂದ ಬುಧವಾರ ಕನಿಷ್ಠ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಮಹೇಶ ಪತ್ತಾರ, ಗುರುಸಿದ್ದಪ್ಪ ಅಂಬಿಗೇರ, ಬಸವಣ್ಣೆಪ್ಪ ನೀರಲಗಿ, ಬಿ.ಐ. ಈಳಿಗೇರ, ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಂಪುಟ ಉಪಸಮಿತಿ ರದ್ದುಪಡಿಸಲು ಒತ್ತಾಯ
  • ಎಪಿಎಂಸಿ ಹಮಾಲಿ ಕಾರ್ಮಿಕರ ಒಕ್ಕೂಟ ನೇತೃತ್ವದಲ್ಲಿ ಪ್ರತಿಭಟನೆ

ಹುಬ್ಬಳ್ಳಿ: labour protest ಬೆಲೆ ಏರಿಕೆಯಿಂದ ಜೀವನ ನಡೆಸಲು ಕಷ್ಟ ಪಡುತ್ತಿರುವ ಶ್ರಮಜೀವಿಗಳಿಗೆ ವೈಜ್ಞಾನಿಕವಾಗಿ ವೇತನ ಪರಿಷ್ಕರಿಸಬೇಕು, ಕನಿಷ್ಠ ವೇತನ ನಿಗದಿ ಕುರಿತ ಸಚಿವ ಸಂಪುಟ ಉಪಸಮಿತಿ ರದ್ದುಪಡಿಸಬೇಕೆಂದು ಆಗ್ರಹಿಸಿ ಎಪಿಎಂಸಿ ಹಮಾಲಿ ಕಾರ್ಮಿಕರ ಒಕ್ಕೂಟ (ಸಿಐಟಿಯು) ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಎಪಿಎಂಸಿ ಬಸವೇಶ್ವರ ವೃತ್ತದಿಂದ ಹಮಾಲಿ ಕಾರ್ಮಿಕರು ಆಡಳಿತ ಕಚೇರಿ ವರೆಗೆ ಮೆರವಣಿಗೆ ನಡೆಸಿ ಕಚೇರಿ ಎದುರು ಪ್ರತಿಭಟಿಸಿದರು. ಲೋಡಿಂಗ್​ ಮತ್ತು ಅನ್​ಲೋಡಿಂಗ್​ ಕನಿಷ್ಠ ವೇತನ ದರಗಳನ್ನು ವೈಜ್ಞಾನಿಕವಾಗಿ ಪರಿಷ್ಕರಿಸಬೇಕು. ಹಮಾಲಿ ಕಾರ್ಮಿಕರಿಗೆ ಪ್ರತ್ಯೇಕ ಕಲ್ಯಾಣ ಮಂಡಳಿ, ನಿವೃತ್ತಿ ಪರಿಹಾರ, ವಸತಿ ಯೋಜನೆ ಮುಂತಾದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.
ಪರಿಷತ ಕನಿಷ್ಠ ವೇತನ ಅಧಿಸೂಚನೆಯಲ್ಲಿ ಎಪಿಎಂಸಿ, ಮಿಲ್​, ಗೋದಾಮು, ಸರಕು ಸಾಗಾಣಿಕೆ, ಬಜಾರಗಳಲ್ಲಿ ಕೆಲಸ ಮಾಡುವ ಲೋಡಿಂಗ್​ ಮತ್ತು ಅನ್​ಲೋಡಿಂಗ್​ ಕಾರ್ಮಿಕರನ್ನೊಳಗೊಂಡ ಒಟ್ಟು 19 ಕೈಗಾರಿಕೆಗಳಿಗೆ ಕನಿಷ್ಠ ವೇತನ ನಿಗದಿ ಮಾಡದೇ ಇರುವುದು
ಅನ್ಯಾಯವೆಸಗಿದಂತಾಗಿದೆ.
ಅಧಿಸೂಚನೆಯಲ್ಲಿ ಕನಿಷ್ಠ ವೇತವನ್ನು ಪರಿಷ್ಕರಣೆ ಮಾಡುವುದಾಗಿ ಪ್ರಕಟಿಸಿದಂತೆ ಲೋಡಿಂಗ್​ ಮತ್ತು ಅನ್​ಲೋಡಿಂಗ್​ ಕನಿಷ್ಠ ವೇತನ (ಪೀಸ್​ ವರ್ಕ್​) ದರಗಳನ್ನು ಕೂಡಲೇ ನಿಗದಿ ಮಾಡುವಂತೆ ಕಾರ್ಮಿಕ ಇಲಾಖೆಗೆ ಮನವಿ ಮಾಡಲಾಗಿತ್ತು.
ಈ ಪ್ರಕ್ರಿಯೆ ಇನ್ನೇನು ಪ್ರಾರಂಭವಾಗುವ ಮುನ್ನವೇ ಮಾಲೀಕರ ಲಾಭಿಗೆ ಮಣಿದ ಸರ್ಕಾರ ಕನಿಷ್ಠ ವೇತನ ಮರುಪರಿಶೀಲನೆಗಾಗಿ ಸಚಿವ ಸಂಪುಟ ಉಪಸಮಿತಿ ರಚಿಸಿರುವುದು ಕಾರ್ಮಿಕರಿಗೆ ಅಘಾತವನ್ನುಂಟು ಮಾಡಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ಸಂಪುಟ ಉಪಸಮಿತಿ ರದ್ದುಪಡಿಸಬೇಕೆಂದು ಆಗ್ರಹಿಸಿ ಎಪಿಎಂಸಿ ಕಾರ್ಯದರ್ಶಿಗಳ ಮುಖಾಂತರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಪತ್ತಾರ, ಬಿ.ಐ. ಈಳಿಗೇರ, ಒಕ್ಕೂಟದ ಮುಖಂಡರಾದ ಬಸವಣ್ಣೆಪ್ಪ ನೀರಲಗಿ, ಗುರುಸಿದ್ದಪ್ಪ ಅಂಬಿಗೇರ, ಮಂಜುನಾಥ ಹುಜರಾತಿ, ಹನಮಂತ ಅಂಬಿಗೇರ, ಕತಾಲಸಾಬ ಮುಲ್ಲಾ, ಹುಸೇನಸಾಬ​ ಮುಂತಾದವರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net