SANTOSH LAD ರಾಜ್ಯಪಾಲರ ಸಹಿಗೆ ಲಾಡ್ ಒತ್ತಾಯ

SANTOSH LAD  ಸಂತೋಷ್ ಲಾಡ್
SANTOSH LAD ಸಂತೋಷ್ ಲಾಡ್
Published on
ಧಾರವಾಡ: ಧಾರವಾಡ ಪ್ರತ್ಯೇಕ ಪಾಲಿಕೆ ರಚನೆ (SANTOSH LAD) ಪ್ರಸ್ತಾಪಕ್ಕೆ ಅನುಮೋದನೆ ನೀಡುವಂತೆ ರಾಜ್ಯಪಾಲರಿಗೆ ಧಾರವಾಡ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಮನವಿ ಮಾಡಿದ್ದಾರೆ.
ಬುಧವಾರ ಕಾಂಗ್ರೆಸ್ ನಿಯೋಗ ಸಂತೋಷ್ ಲಾಡ್ ನೇತೃತ್ವದಲ್ಲಿ ಲೋಕಭವನಕ್ಕೆ ಭೇಟಿ ನೀಡಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವ ಲಾಡ್, ಪ್ರತ್ಯೇಕ ಧಾರವಾಡ ಪಾಲಿಕೆ ಆಗಬೇಕು ಎಂದು ಹಲವು ವರ್ಷಗಳ ಬೇಡಿಕೆ ಇತ್ತು. ಹೋರಾಟವೂ ನಡೆದಿತ್ತು. ನಮ್ಮ ಸರ್ಕಾರ ಬಂದ ನಂತರ ಪ್ರತ್ಯೇಕ ಪಾಲಿಕೆ ಬೇಡಿಕೆಯನ್ನು ಮುಖ್ಯಂತ್ರಿಗಳ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಂಗೀಕರಿಸಿ, ರಾಜ್ಯಪಾಲರ ಒಪ್ಪಿಗೆಗೆ ಕಳಿಸಲಾಗಿತ್ತು. ಒಂದು ವರ್ಷ ಕಳೆದರು ರಾಜ್ಯಪಾಲರಿಂದ ಯಾವುದೇ ಪ್ರತಿಕ್ರಿಯೆ ಸಿಕ್ಕಿರಲಿಲ್ಲ. ರಾಜ್ಯಪಾಲರೂ ಯಾವಾಗಲೂ ಇದೇ ರೀತಿ ಮಾಡುತ್ತಾರೆ. ತಮಿಳುನಾಡಿನಲ್ಲಿ ರಾಜ್ಯಪಾಲರು ಏನು ಮಾಡಿದರು ಎಂದು ಎಲ್ಲರಿಗೂ ಗೊತ್ತಿದೆ ಎಂದರು. ಇದೀಗ ಪ್ರತ್ಯೇಕ ಪಾಲಿಕೆಯ ಹೋರಾಟ ಸಮಿತಿಯವರು ಒತ್ತಡ ಹಾಕಲು ಆರಂಭಿಸಿದರು. ಸರ್ಕಾರದ ಪ್ರಸ್ತಾವನೆಯನ್ನು ಅಂಗೀಕರಿಸಬೇಕು ಎಂದು ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದರು.
ಆದಷ್ಟು ಬೇಗ ಧಾರವಾಡ ಪಾಲಿಕೆ ರಚನೆಗೆ ಅನುಮೋದನೆ ನೀಡಬೇಕು ಎಂದು ಜಿಲ್ಲೆಯ ಜನತೆಯ ಪರವಾಗಿ ಮನವಿ ಮಾಡಿರುವುದಾಗಿ ಹೇಳಿದರು.
ಶಾಸಕರಾದ ಪ್ರಸಾದ ಅಬ್ಬಯ್ಯ, ಎನ್.ಎಚ್. ಕೋನರೆಡ್ಡಿ, ಹೋರಾಟ ಸಮಿತಿಯ ಮುಖಂಡರಾದ ಬಿ.ಡಿ. ಹೀರೇಮಠ, ಹುಡಾ ಮಾಜಿ ಅಧ್ಯಕ್ಷ ದಾನಪ್ಪ ಕಬ್ಬೇರ, ಹುಬ್ಬಳ್ಳಿ- ಧಾರವಾಡ ಪಾಲಿಕೆ ಮಾಜಿ ಸದಸ್ಯ ನಾಗರಾಜ ಗೌರಿ, ಪಾಲಿಕೆ ಸದಸ್ಯ ಮಯೂರ ಮೋರೆ, ಗುರುರಾಜ ಹುಣಸಿಮರದ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net