ಶಿರೂರ ಗ್ರಾಮದ ಮಲ್ಲಿಕಾರ್ಜುನಗೌಡ ಪಾಟೀಲ ಎಂಬುವರು ತಮ್ಮ ಜಮೀನನ್ನು ಅಳತೆ ಮಾಡಿ ಪೋಡಿ ಮಾಡಿ ಕೊಡಲು ಅಜಿರ್ ಸಲ್ಲಿಸಿದ್ದರು. ಇದಕ್ಕಾಗಿ ಸರ್ವೇಯರ್ ರಾವೇಂದ್ರ ಕುಲಕರ್ಣಿ 15 ಸಾವಿರ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದರು. ಈ ಕುರಿತು ಮಲ್ಲಿಕಾರ್ಜುನಗೌಡ ಪಾಟೀಲ ಧಾರವಾಡ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. 2019ರ ಜೂ. 3ರಂದು ಸಂಜೆ 4 ಗಂಟೆಗೆ ಕುಂದಗೋಳ ಹೋಟೆಲ್ವೊಂದರಲ್ಲಿ 15 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು. ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಅಂದಿನಿಂದ ವಿಚಾರಣೆ ನಡೆಯುತ್ತಿತ್ತು.