ಉತ್ತಮ ಪ್ರಜೆಗಳಾಗಿ (Law school)ಜೀವನ ನಡೆಸುವುದು ಶ್ರೇಷ್ಠ

ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು (Law school) ವಿಶ್ವವಿದ್ಯಾಲಯದ ಕಾನೂನು ಶಾಲೆಯಲ್ಲಿ ಮಂಗಳವಾರ ಆಯೋಜಿಸಿದ್ದ 2025-26ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘ, ಜಿಮ್ಾನಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪದಲ್ಲಿ ಡಾ. ಎ.ಎಂ. ಖಾನ್ ಅವರನ್ನು ಸನ್ಮಾನಿಸಲಾಯಿತು. ಪ್ರೊ. ಡಾ. ಸಿ. ಬಸವರಾಜು, ಡಾ. ರತ್ನಾ ಭರಮಗೌಡರ್, ಇತರರು ಇದ್ದರು.

Published on
ಹುಬ್ಬಳ್ಳಿ: ಇಂದಿನ ಯುವ ಜನತೆ (Law school)ತಂತ್ರಜ್ಞಾನ ಬಳಕೆ ಮಾಡುವಲ್ಲಿ ಹೆಚ್ಚು ಉತ್ಸುಕರಾಗಿದ್ದು ಮಾನವೀಯ ಮೌಲ್ಯಗಳನ್ನು ಮರೆಯುತ್ತಿದ್ದಾರೆ. ಒಳ್ಳೆಯ ಗುಣಗಳ್ಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಪ್ರಜೆಗಳಾಗಿ ಬದಕುವುದೇ ಶ್ರೇಷ್ಠ ಎಂದು ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಡಾ.ಎ.ಎಂ. ಖಾನ್ ಹೇಳಿದರು.
ಇಲ್ಲಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕಾನೂನು ಶಾಲೆಯಲ್ಲಿ ಮಂಗಳವಾರ ಆಯೋಜಿಸಿದ್ದ 2025-26ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘ, ಜಿಮ್ಾನಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.
ಎಷ್ಟೇ ವಿದ್ಯೆ ಕಲಿತರೂ ತಂದೆ ತಾಯಿಯಂದಿರನ್ನು ಗೌರವಿಸಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನದೇ ಆದ ಪ್ರತಿಭೆ ಹೊಂದಿರುತ್ತಾನೆ. ಅವಕಾಶ ಸಿಕ್ಕಾಗ ಪ್ರತಿಭೆಯನ್ನು ಬಳಸಿಕೊಳ್ಳಬೇಕು. ಶಿಸ್ತು, ಪ್ರಾಮಾಣಿಕತೆಯಿಂದ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದರು.
ಮೌಲ್ಯಮಾಪನ ಕುಲಸಚಿವೆ ಪ್ರೊ. ಡಾ. ರತ್ನಾ ಭರಮಗೌಡರ್, ಅಧ್ಯಕ್ಷತೆ ವಹಿಸಿದ್ದ ಕಾನೂನು ವಿವಿ ಕುಲಪತಿ ಪೊ›. ಡಾ. ಸಿ. ಬಸವರಾಜು ಮಾತನಾಡಿದರು., ಸಂಘದ ಸದ್ಯಸರಾದ ಅರ್ಪಣಾ, ವೆಂಕಟೇಶ ಮತ್ತು ಧನ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ದೀಪ್ತಿ ಸ್ವಾಗತಿಸಿದರು. ಸಿಂಚನಾ ವಂದಿಸಿದರು. ಶಬರಿ ಪ್ರಾರ್ಥಿಸಿದರು. ನಕ್ಷತ್ರ ಕಾರ್ಯಕ್ರಮ ರೂಪಿಸಿದರು. ಡಾ. ಕುಮುದಾ ಕರೋಗಲ ವರ್ಷದ ವರದಿ ವಾಚಿಸಿದರು. ವಿವಿಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ಮತ್ತು ಪ್ರಮಾಣ ಪತ್ರ ವಿತರಿಸಲಾಯಿತು. ಸಾಂಸೃತಿಕ ಕಾರ್ಯಕ್ರಮಗಳು ನಡೆದವು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net