ಚುನಾವಣೆಯೊಳಗೆ ಅಧಿಸೂಚನೆ ಹೊರಡಿಸಲಿ election

election ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘದ (ಅಕ್ಷಾ) ಮುಖ್ಯಸ್ಥ ಕಾಂತಕುಮಾರ.
election ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘದ (ಅಕ್ಷಾ) ಮುಖ್ಯಸ್ಥ ಕಾಂತಕುಮಾರ.
Published on

ಪ್ರಮುಖ ಮುಖ್ಯಾಂಶಗಳು

  • ಸರ್ಕಾರಿ ಹುದ್ದೆಗಳ ಭರ್ತಿಗೆ ಗಡವು ನೀಡಿದ ಕಾಂತಕುಮಾರ.
  • ಸರ್ಕಾರ 3 ವರ್ಷವಾದರೂ ಕನಿಷ್ಠ 5 ಸಾವಿರ ಹುದ್ದೆಗಳನ್ನೂ ತುಂಬಿಲ್ಲ.
  • ಮುಖ್ಯಮಂತ್ರಿ ಅವರಿಗೆ ಈ ರೀತಿಯ ಸುಳ್ಳು ಹೇಳಿಕೆ ನೀಡುವುದು ಶೋಭೆ ತರುವುದಿಲ್ಲ.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ 43 ಇಲಾಖೆಗಳಲ್ಲಿ 2.80 ಲಕ್ಷ ಖಾಲಿ ಹುದ್ದೆಗಳಿವೆ. ಸರ್ಕಾರ 3 ವರ್ಷವಾದರೂ ಕನಿಷ್ಠ 5 ಸಾವಿರ ಹುದ್ದೆಗಳನ್ನೂ ತುಂಬಿಲ್ಲ ಎಂದು ದೂರಿದರು.
ಈ ಮೊದಲು ಧಾರವಾಡದಲ್ಲಿ ಪ್ರತಿಭಟನೆಗೆ ಮುಂದಾದಾಗ ಪೊಲೀಸರು ಅನುಮತಿ ನೀಡಲಿಲ್ಲ. ಹುದ್ದೆಗಳ ಭರ್ತಿಗೆ ಸಚಿವ ಸಂತೋಷ ಲಾಡ್ ಸೇರಿದಂತೆ ವಿವಿಧ ಸಚಿವರಿಗೆ ಮನವಿ ಸಲ್ಲಿಸಿದ್ದೆವು. ಅವರು ಯಾವುದೇ ರೀತಿಯ ಭರವಸೆ ನೀಡಲಿಲ್ಲ.
ಹೀಗಾಗಿ, ಅನಿವಾರ್ಯವಾಗಿ ಹೋರಾಟ ನಡೆಸಲು ಬಿಜೆಪಿ ಅನುಮತಿ ಪಡೆದುಕೊಂಡಿತು. ಅವರೊಂದಿಗೆ ಸೇರಿ, ಹೋರಾಟ ನಡೆಸಿದೆವು ಎಂದರು. ಸರ್ಕಾರ ಒಂದು ವಾರದಲ್ಲಿ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು.
ಇಲ್ಲದಿದ್ದರೆ ಪಕ್ಷಾತೀತವಾಗಿ ವಿದ್ಯಾರ್ಥಿಗಳು, ಪಾಲಕರು, ನಿವೃತ್ತ ಸೈನಿಕರು ಸೇರಿದಂತೆ ರಾಜ್ಯದ ಜನರೊಂದಿಗೆ ಸೇರಿ ಪ್ರತಿ ಹಳ್ಳಿಯಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಶಿಕ್ಷಣ ಇಲಾಖೆಯಲ್ಲಿ 80 ಸಾವಿರ ಹುದ್ದೆಗಳಿವೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಒಂದೂ ಹುದ್ದೆ ತುಂಬಿಲ್ಲ. ಈ ಸರ್ಕಾರದ ಅವಧಿಯಲ್ಲಿ ವಿವಿಧ ಇಲಾಖೆಗಳಲ್ಲಿನ 80 ಸಾವಿರ ಹುದ್ದೆಗಳು ಖಾಲಿ ಇವೆ. ಈ ಹಿಂದಿನ ಬೇರೆ ಸರ್ಕಾರಗಳ ಅವಧಿಯಲ್ಲಿ 2 ಲಕ್ಷ ಹುದ್ದೆಗಳು ಖಾಲಿ ಇವೆ. 2019ರಿಂದಲೇ ಖಾಲಿ ಹುದ್ದೆಗಳ ಭರ್ತಿಗಾಗಿ ಹೋರಾಟ ಮಾಡುತ್ತಿರುವುದಾಗಿ ಕಾಂತಕುಮಾರ ಹೇಳಿದರು.
ಧಾರವಾಡದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಹೋರಾಟದಲ್ಲಿ ಬ್ಯಾನರ್​ಗಳನ್ನು ಹರಿದು, ಬೆಂಕಿ ಹಚ್ಚಿದವರು ನಮ್ಮ ವಿದ್ಯಾರ್ಥಿಗಳು ಅಲ್ಲ. ಹೊರಗಿನ ಜನರು ಹೋರಾಟದಲ್ಲಿ ಭಾಗಿಯಾಗಿ, ಈ ಕೆಲಸ ಮಾಡಿದ್ದಾರೆ ಎಂದು ದೂರಿದರು.
ಸುಳ್ಳು ಹೇಳಿಕೆ ಬೇಡ : ಕಳೆದ 3 ವರ್ಷದಲ್ಲಿ 8,157 ಹುದ್ದೆಗಳನ್ನು ಭರ್ತಿ ಮಾಡಿದ್ದಾಗಿ ಕಳೆದ ಅಧಿವೇಶನದಲ್ಲಿ ಸರ್ಕಾರ ಅಧಿಕೃತ ಹೇಳಿಕೆ ನೀಡಿದೆ. ಇದೀಗ ಸಿಎಂ ಸಿದ್ದರಾಮಯ್ಯ ಅವರು 40 ಸಾವಿರ ಹುದ್ದೆಗಳ ಭರ್ತಿ ಮಾಡಿದ್ದಾಗಿ ಹೇಳಿಕೊಳ್ಳುತ್ತಿದ್ದಾರೆ.
ಹಲವಾರು ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಅವರಿಗೆ ಈ ರೀತಿಯ ಸುಳ್ಳು ಹೇಳಿಕೆ ನೀಡುವುದು ಶೋಭೆ ತರುವುದಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ ಹೇಳಿದರು.
ಕಾಂಗ್ರೆಸ್ ಸರ್ಕಾರ ವಿವಿಧ ಇಲಾಖೆ ಹುದ್ದೆಗಳ ಭರ್ತಿಗೆ ಇದುವರೆಗೆ ಒಂದೂ ನೋಟಿಫಿಕೇಶನ್ ಹೊರಡಿಸಿಲ್ಲ. ಸರ್ಕಾರದ ಬೊಕ್ಕಸ ಖಾಲಿ ಆಗಿರುವುದರಿಂದ ಹುದ್ದೆಗಳ ಭರ್ತಿಗೆ ಸರ್ಕಾರ ಮುಂದಾಗುತ್ತಿಲ್ಲ ಎಂದು ಟೀಕಿಸಿದರು.
50 ಸಾವಿರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮತಿ ನೀಡಿದ್ದು, ಸರ್ಕಾರ ತಕ್ಷಣ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು ಎಂದು ಒತ್ತಾಯಿಸಿದರು.
ಧಾರವಾಡದಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟದಲ್ಲಿ ಬಿಜೆಪಿ ರಾಜಕಾರಣ ಮಾಡಿಲ್ಲ. ರಾಜ್ಯ ಸರ್ಕಾರ ಪೊಲೀಸರ ಮುಖಾಂತರ ಹೋರಾಟ ಹತ್ತಿಕ್ಕಲು ಪ್ರಯತ್ನಿಸಿತು. ಹಾಗಾಗಿ, ಜವಾಬ್ದಾರಿಯುತ ಪ್ರತಿಪಕ್ಷವಾಗಿ ಬಿಜೆಪಿ ವಿದ್ಯಾರ್ಥಿಗಳೊಂದಿಗೆ ಸೇರಿ ಹೋರಾಟ ನಡೆಸಿತು ಎಂದು ಅರವಿಂದ ಬೆಲ್ಲದ ಹೇಳಿದರು.
ಕಾಂಗ್ರೆಸ್ ಸರ್ಕಾರದ ಕೆಲವು ಸಚಿವರು ಹಾಗೂ ಮುಖಂಡರು ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಕಳೆದ 11 ವರ್ಷದಲ್ಲಿ 7.30 ಲಕ್ಷ ನೇರ ಹುದ್ದೆಗಳನ್ನು ಭರ್ತಿ ಮಾಡಿದೆ.
ಯುಪಿಎ ಸರ್ಕಾರದ ಅವಧಿಯಲ್ಲಿ ಕೇವಲ 90 ಲಕ್ಷ ಇಪಿಎಫ್ ಖಾತೆಗಳು ಸೃಷ್ಟಿಯಾಗಿದ್ದವು. ಆದರೆ, ಬಿಜೆಪಿ ನೇತೃತ್ವದ ಎನ್​ಡಿಎ ಅಧಿಕಾರದಲ್ಲಿ 17 ಕೋಟಿ ಇಪಿಎಫ್ ಖಾತೆಗಳು ಸೃಷ್ಟಿಯಾಗಿವೆ ಎಂದರು.
ಸ್ಟಾರ್ಟ್​ಅಪ್, ಸ್ಕಿಲ್ ಇಂಡಿಯಾ ಹಾಗೂ ಇತರ ಸರ್ಕಾರದ ಯೋಜನೆಗಳ ಮುಖಾಂತರ ಕೋಟ್ಯಾಂತರ ಜನರು ಉದ್ಯೋಗ ಪಡೆದುಕೊಂಡಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಟೀ ಶರ್ಟ್ ಧರಿಸಿ ಓಡಾಡಿದರೆ ಯುವಕರ ಸಮಸ್ಯೆ ಅರಿತುಕೊಳ್ಳಲು ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net