ಈ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ವಿವಿಧ ಸಂಘ-ಸಂಸ್ಥೆಗಳು, ಉದ್ಯಮಿಗಳು, ರೈತರು, ವ್ಯಾಪಾರಸ್ಥರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಬೆಂಗಳೂರು- ಮುಂಬೈ ಸ್ಲೀಪರ್ ವಂದೇ ಭಾರತ್ ರೈಲನ್ನು ತುಮಕೂರು-ದಾವಣಗೆರೆ-ಹುಬ್ಬಳ್ಳಿ-ಬೆಳಗಾವಿ-ಪುಣೆ ಮಾರ್ಗದ ಮೂಲಕವೇ ಸಂಚರಿಸುವಂತೆ ಕೇಂದ್ರ ಸರ್ಕಾರ ಹಾಗೂ ರೈಲ್ವೆ ಸಚಿವಾಲಯ ಶೀಘ್ರ ಸಕಾರಾತ್ಮಕ ನಿರ್ಧಾರ ಕೈಗೊಳ್ಳಬೇಕೆಂದು ಸಂಸ್ಥೆಯ ಅಧ್ಯಕ್ಷ ಜಿ.ಕೆ. ಆದಪ್ಪಗೌಡರ ಹಾಗೂ ಗೌರವ ಕಾರ್ಯದರ್ಶಿ ಉದಯ ರೇವಣಕರ ಆಗ್ರಹಿಸಿದ್ದಾರೆ.