ಆಸ್ಪತ್ರೆಗಳಿಗೆ ಅಗತ್ಯ ಸಿಬ್ಬಂದಿ, ಸೌಲಭ್ಯ ಪೂರೈಸಲು ಸರ್ಕಾರಕ್ಕೆ ಪತ್ರ

ರಾಜ್ಯ ಮಹಿಳಾ ಆಯೋಗದ ಅಧ್ಯೆ ಡಾ. ನಾಗಲಕ್ಷ್ಮೀ ಚೌಧರಿ ಧಾರವಾಡ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ್ದರು.
ರಾಜ್ಯ ಮಹಿಳಾ ಆಯೋಗದ ಅಧ್ಯೆ ಡಾ. ನಾಗಲಕ್ಷ್ಮೀ ಚೌಧರಿ ಧಾರವಾಡ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ್ದರು.
Published on
ಧಾರವಾಡ: ರಾಜ್ಯ ಮಹಿಳಾ ಆಯೋಗದ ಅಧ್ಯೆ ಡಾ. ನಾಗಲಕ್ಷ್ಮೀ ಚೌಧರಿ ಇಲ್ಲಿನ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ್ದರು. ಚಿಕಿತ್ಸೆಗಾಗಿ ಆಗಮಿಸಿದ್ದ ಸಾರ್ವಜನಿಕರನ್ನು ಮಾತನಾಡಿಸಿ ಆಸ್ಪತ್ರೆಯಲ್ಲಿ ವೈದ್ಯಕಿಯ ಸಿಬ್ಬಂದಿಯ ಸ್ಪಂದನೆ, ಚಿಕಿತ್ಸೆ, ಉಚಿತ ಔಷಧ ವಿತರಣೆಯ ಕುರಿತು ಮಾಹಿತಿ ಪಡೆದರು. ಆಸ್ಪತ್ರೆಯ ಹೆರಿಗೆ ವಿಭಾಗಕ್ಕೆ ಭೇಟಿ ನೀಡಿ, ಬಾಣಂತಿಯರನ್ನು ಮಾತನಾಡಿಸಿ ಸೌಲಭ್ಯ ಹಾಗೂ ಚಿಕಿತ್ಸೆಯ ಕುರಿತು ಅಭಿಪ್ರಾಯ ಸಂಗ್ರಹಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಆಸ್ಪತ್ರೆ ಮತ್ತು ಜಿಲ್ಲಾ ಶಸ್ತ್ರಚಿಕಿತ್ಸಕರು, ವೈದ್ಯಾಧಿಕಾರಿಗಳ ಬಗ್ಗೆ ಉತ್ತಮ ಅಭಿಪ್ರಾಯ ನೀಡಿದ್ದಾರೆ. ತಾಯಿ ಮತ್ತು ಮಗುವಿನ ಜೀವ ಉಳಿಸುವುದು ಮಹತ್ವದ ಕಾರ್ಯ. ಅದನ್ನು ಜಿಲ್ಲಾ ಆಸ್ಪತ್ರೆಯ ವೈದ್ಯರು ಅತ್ಯಂತ ಕಳಕಳಿಯಿಂದ ಮಾಡುತ್ತಿದ್ದಾರೆ. ಒಂದು ತಿಂಗಳಲ್ಲಿ 550 ಸುರತ ಹೆರಿಗೆ ಮಾಡಿಸಿರುವುದು ಶ್ಲಾನೀಯ ಕೆಲಸ.
ಸಖಿ ಒನ್​ ಕೇಂದ್ರಕ್ಕೆ ಭೇಟಿ ನೀಡಿ ಸಾರ್ವಜನಿಕರ ಸ್ಪಂದನೆ ಹಾಗೂ ಅರಿವು ಮೂಡಿಸುವ ಕುರಿತು ಸಿಬ್ಬಂದಿಯೊಂದಿಗೆ ಚರ್ಚಿಸಿ ಮಾಹಿತಿ ಪಡೆಯಲಾಗಿದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಸಖಿ ಒನ್​ ಕೇಂದ್ರದ ಕುರಿತು ಅರಿವು ಕಾರ್ಯಕ್ರಮಗಳನ್ನು ಆಯೋಜಿಸಲು ಕ್ರಮ ವಹಿಸಲಾಗುವುದು ಎಂದರು.
ರಾಜ್ಯದಲ್ಲಿ ಡಿ ಗ್ರೂಪ್​, ನರ್ಸ್​ ಹಾಗೂ ವೈದ್ಯರ ಕೊರತೆ ಇದೆ. ಅಲ್ಲದೆ, ಎಂಆರ್​ಐ ಸ್ಕ್ಯಾನಿಂಗ್ ಕೊರತೆ ಇರುವುದನ್ನು ಸರ್ಕಾರದ ಗಮನಕ್ಕೆ ತರುತ್ತೇನೆ. ಸಾರ್ವಜನಿಕರು ಮನವಿಗಳನ್ನು ಸಲ್ಲಿಸಿದ್ದು, ಈ ಕುರಿತು ಪರಿಶೀಲಿಸಿ ಸಂಬಂಧಪಟ್ಟ ಇಲಾಖೆಗಳಿಗೆ ಪತ್ರ ಬರೆದು ಕ್ರಮ ವಹಿಸಲಾಗುವುದು ಎಂದರು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸಂಗಪ್ಪ ಗಾಬಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಡಾ. ಎಚ್​.ಎಚ್​. ಕುಕನೂರ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್​.ಎಂ. ಹೊನಕೇರಿ ಹಾಗೂ ವೈದ್ಯಕಿಯ ಸಿಬ್ಬಂದಿ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net