lingaraja patil ಎಂಎಲ್‌ಸಿ ಲಿಂಗರಾಜ ಪಾಟೀಲ ಅವರು ಸಾಹಿತಿ ಡಾ.ಡಿ.ಎಸ್. ಕರ್ಕಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
Published on:
Copied
Follow Us
ಹುಬ್ಬಳ್ಳಿ: ನಮ್ಮ ದೇಶದ ಆಚಾರ-ವಿಚಾರ, ಸಾಂಸ್ಕೃತಿಕ ಮೌಲ್ಯಗಳನ್ನು ಉಳಿಸಿ ಬೆಳೆಸುವುದು ಅಗತ್ಯ ಎಂದು ವಿಧಾನ ಪರಿಷತ್ ಸದಸ್ಯ ಲಿಂಗರಾಜ ಪಾಟೀಲ
lingaraja patil
ಹೇಳಿದರು.
ಡಾ.ಡಿ.ಎಸ್. ಕರ್ಕಿ ಸಾಹಿತ್ಯ ವೇದಿಕೆ ಟ್ರಸ್ಟ್, ಜನಪದರು ಕರ್ನಾಟಕ ಜಾನಪದ ಜಗತ್ತು ಟ್ರಸ್ಟ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಇಲ್ಲಿಯ ಲಿಂಗರಾಜನಗರದ ಸಾಂಸ್ಕೃತಿಕ ಸಮುದಾಯ ಭವನದಲ್ಲಿ ಶನಿವಾರ ಏರ್ಪಡಿಸಿದ್ದ ರಕ್ಷಾ ಬಂಧನ ಹಾಗೂ ಶ್ರಾವಣ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ಹಿರಿಯರು ನಮಗೆ ನೀಡಿರುವ ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದರು.
ಕೇಶವ ವಿದ್ಯಾ ಕೇಂದ್ರದ ಆಡಳಿತಾಧಿಕಾರಿ ಶ್ರೀಧರ ಜೋಶಿ ಅವರು ರಕ್ಷಾ ಬಂಧನದ ಮಹತ್ವ, ದೇಶರಕ್ಷಣೆ ಹಾಗೂ ಸೌಹಾರ್ದತೆಯ ಕುರಿತು ಮಾತನಾಡಿದರು.
ಪ್ರೋಬಸ್ ಕ್ಲಬ್ ಲಿಂಗರಾಜನಗರದ ಅಧ್ಯಕ್ಷ ಎಸ್.ಐ. ಅಂಕಲಿ, ಲಿಂಗರಾಜನಗರ ಮಹಿಳಾ ಮಂಡಳದ ಅಧ್ಯಕ್ಷೆ ಲತಾ ಉಮ್ರಾಣಿ, ಮಾತನಾಡಿದರು. ಜಾನಪದ ತಜ್ಞ ಡಾ. ರಾಮು ಮೂಲಗಿ, ಪ್ರಾಧ್ಯಾಪಕ ಡಾ.ಎಚ್.ಎಚ್.ನದಾಫ್, ಜಾನಪದ ಸಂಗೀತ ಪ್ರಸ್ತುತಪಡಿಸಿದರು. ಶಿವಸ್ವಾಮಿ ಹಿರೇಮಠ ಹಾರ್ಮೋನಿಯಂ, ಡಾ. ನಾಗಲಿಂಗ ಮುರಗಿ ತಬಲಾ ಸಾಥ್ ನೀಡಿದರು.
ಸಮುದಾಯ ಭವನದ ಕಾರ್ಯದರ್ಶಿ ಎಂ.ಟಿ. ಹೊಸಮನಿ ಅಧ್ಯಕ್ಷತೆ ವಹಿಸಿದ್ದರು. ಕರ್ಕಿ ಟ್ರಸ್ಟ್ ಅಧ್ಯಕ್ಷ ಸಂತೋಷ ಕರ್ಕಿ. ಗದಿಗೆಯ್ಯ ಹಿರೇಮಠ, ಡಾ.ಎಸ್.ಎಸ್. ಮಾಳವಾಡ, ಗುರುಸಿದ್ದಪ್ಪ ಬಡಿಗೇರ ಇತರರಿದ್ದರು.