ಹುಬ್ಬಳ್ಳಿಯ (literature) ಕೆಎಲ್‌ಇ ಸಂಸ್ಥೆಯ ಜೆ.ಜಿ. ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮಂಗಳವಾರ ಏರ್ಪಡಿಸಿದ್ದ 112ನೇ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಮತ್ತು ಕನ್ನಡ ನಾಡು-ನುಡಿ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
Published on:
Copied
Follow Us
ಹುಬ್ಬಳ್ಳಿ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ (literature) ಆಶ್ರಯದಲ್ಲಿ ಇಲ್ಲಿಯ ಕೆಎಲ್‌ಇ ಸಂಸ್ಥೆಯ ಜೆ.ಜಿ. ವಾಣಿಜ್ಯ ಮಹಾವಿದ್ಯಾಲಯದಲ್ಲಿ 112ನೇ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಮತ್ತು ಕನ್ನಡ ನಾಡು-ನುಡಿ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಮಂಗಳವಾರ ಏರ್ಪಡಿಸಲಾಗಿತ್ತು.
ಸಾಹಿತಿ ಪ್ರೊ.ಕೆ.ಎಸ್. ಕೌಜಲಗಿ ಮಾತನಾಡಿ, ಕನ್ನಡ ನಾಡು-ನುಡಿ ಶ್ರೀಮಂತವಾದದು. ನಾವು ಇಂಥ ನಾಡಿಗೆ ಋಣಿಯಾಗಿರುವುದು ಆದ್ಯ ಕರ್ತವ್ಯ ಎಂದರು.
ಪ್ರಾಚಾರ್ಯ ಪ್ರೊ.ಎಸ್.ಎಲ್. ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡ ನಮ್ಮೆಲ್ಲರ ಅನ್ನದ ಭಾಷೆ. ಕನ್ನಡ ನಾಡು-ನುಡಿ ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದರು.
ಗೀತ ಗಾಯನವನ್ನು ಪ್ರೊ. ಶೋಭಾ ಜಾಬೀನ ನಡೆಸಿಕೊಟ್ಟರು. ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ನೇತ್ರಾವತಿ ಗಬ್ಬೂರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪ್ರಾಚಾರ್ಯ ಪ್ರೊ.ಎಸ್.ಎಲ್. ಪಾಟೀಲ, ಉಪನ್ಯಾಸಕರಾದ ಪ್ರೊ. ಶೋಭಾ ಜಾಬೀನ, ಡಾ. ನೇತ್ರಾವತಿ ಗಬ್ಬೂರ ಅವರನ್ನು ಸನ್ಮಾನಿಸಲಾಯಿತು.
ಕಸಾಪ ಜಿಲ್ಲಾಧ್ಯಕ್ಷ ಡಾ. ಲಿಂಗರಾಜ ಅಂಗಡಿ, ಐಕ್ಯೂಎಸಿ ಸಂಯೋಜಕ ಡಾ. ಗುಣಿತ್ ಎನ್.ಎಸ್., ಸಿದ್ದಮ್ಮ ಅಡವೆಣ್ಣವರ, ಪ್ರೊ. ಪ್ರತಿಭಾ ಕೆ., ಚನ್ನಬಸಪ್ಪ ಧಾರವಾಡಶೆಟ್ಟರ್, ಕನ್ನಡ ಸಂಘದ ಪದಾಧಿಕಾರಿ ಸಮರ್ಥ ಅಂಕಲಕೂಟೆ ಇತರರಿದ್ದರು.