WATER ಅಮ್ಮಿನಭಾವಿ ನೀರು ಶುದ್ಧೀಕರಣ ಘಟಕಕ್ಕೆ ಮೇಯರ್ ಭೇಟಿ

WATER ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಮೇಯರ್ ಜ್ಯೋತಿ ಪಾಟೀಲ ಭೇಟಿ ನೀಡಿ ಪರಿಶೀಲಿಸಿದರು.
WATER ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಮೇಯರ್ ಜ್ಯೋತಿ ಪಾಟೀಲ ಭೇಟಿ ನೀಡಿ ಪರಿಶೀಲಿಸಿದರು.
Published on
ಧಾರವಾಡ: ಹುಬ್ಬಳ್ಳಿ ಧಾರವಾಡ ಅವಳಿ ನಗರಕ್ಕೆ (WATER ) ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿರುವ ಕಾರಣ ಅಮ್ಮಿನಭಾವಿ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಮೇಯರ್ ಜ್ಯೋತಿ ಪಾಟೀಲ, ಉಪ ಮೇಯರ್ ಸಂತೋಷ ಚವ್ಹಾಣ, ಪಾಲಿಕೆ ಆಯುಕ್ತ ರುದ್ರೇಶ ಘಾಳಿ, ಸದಸ್ಯರಾದ ರಾಜು ಕಮತಿ, ಶಂಭು ಸಾಲಮನಿ ಹಾಗೂ ಅಧಿಕಾರಿಗಳು ಮಂಗಳವಾರ ರಾತ್ರಿ ಭೇಟಿ ನೀಡಿ ಪರಿಶೀಲಿಸಿದರು. ಬೆಳಗಾವಿ ಹಾಗೂ ಸವದತ್ತಿ ಭಾಗಗಳಲ್ಲಿ ಹೆಚ್ಚು ಮಳೆಯಾಗಿದ್ದರಿಂದ ಅಮ್ಮಿನಭಾವಿ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಮಣ್ಣು ಮಿಶ್ರಿತ ನೀರಿನ ಪ್ರಮಾಣ ಹೆಚ್ಚಾಗಿದೆ. ಶುದ್ಧೀಕರಣ ಘಟಕದಲ್ಲಿ ಕಾರ್ಯಾಚರಣೆ ನಡೆಸಲು ಅಡಚಣೆ ಉಂಟಾಗಿದೆ. ಎಲ್ಲ ಘಟಕಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಗುತ್ತಿದೆ. ಆದ್ದರಿಂದ ಹುಬ್ಬಳ್ಳಿ ಧಾರವಾಡಕ್ಕೆ ಬುಧವಾರದಿಂದ  ನೀರು ಸರಬರಾಜು ಪ್ರಾರಂಭವಾಗಲಿದೆ. ಸಾರ್ವಜನಿಕರು 2-3 ದಿನ ನೀರನ್ನು ಸೋಸಿ, ಕುದಿಸಿ ಬಳಸಬೇಕು ಎಂದು ಮೇಯರ್ ಜ್ಯೋತಿ ಪಾಟೀಲ ವಿನಂತಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net